ಮೈಸೂರು

ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಒಂದು ತಿಂಗಳ ವೇತನದ ಚೆಕ್ ನ್ನು ಜಿಲ್ಲಾಧಿಕಾರಿಗಳ ಮೂಲಕ ಹಸ್ತಾಂತರಿಸಿದ ಶಾಸಕ ರಾಮದಾಸ್

ಮೈಸೂರು,ಏ.1:- ಶಾಸಕ ಎಸ್.ಎ.ರಾಮದಾಸ್ ತಮ್ಮ ಒಂದು ತಿಂಗಳ ವೇತನ ಒಂದು ಲಕ್ಷರೂ.ಚೆಕ್ ನ್ನು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಮೂಲಕ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಹಸ್ತಾಂತರಿಸಿದರು.

ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಆಹಾರ ಪದಾರ್ಥಗಳನ್ನು ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆ ಮಾಡಲಾಗುತ್ತಿದ್ದು ಜನರು ಹೊರಬರದಂತೆ ಶಾಸಕ ಎಸ್.ಎ.ರಾಮದಾಸ್  ಮಾಧ್ಯಮ, ಪ್ರಕಟಣೆ ಮೂಲಕ ತಿಳಿಸಿದ್ದು, ಸೋಂಕು ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಹಲವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಆಹಾರ ಪದಾರ್ಥಗಳಿಗೆ ತೊಂದರೆಯಾಗದಂತೆ ವಾಹನಗಳ ಮೂಲಕ ಮನೆಮನೆಗೆ ರಿಯಾಯಿತಿ ದರದಲ್ಲಿ ವಿತರಿಸಲು ವ್ಯವಸ್ಥೆ ಮಾಡಲಾಗಿದೆ. ಪ್ರಥಮ ಹಂತದಲ್ಲಿ ರಿಲೆಯನ್ಸ್ ಸೇರಿ ಇತರರು ಮುಂದೆ ಬಂದಿದ್ದು ವಾಹನಗಳಲ್ಲಿ ಬಡಾವಣೆ ಗಳಲ್ಲಿ ಸಂಚರಿಸಿ ಧ್ವನಿವರ್ಧಕದ ಮೂಲಕ ಅಕ್ಕಿ ಗೋಧಿ ಹಿಟ್ಟು ಎಣ್ಣೆ, ಸಕ್ಕರೆ, ಬೇಳೆ ಸೇರಿದಂತೆ ಇನ್ನಿತರ ವಸ್ತುಗಳನ್ನು ಮಾರಾಟ ಮಾಡಲಾಗುತ್ತಿದೆ. ಆದ್ದರಿಂದ ಜನರು ಸಹಕರಿಸಬೇಕೆಂದು ಮನವಿ ಮಾಡಿದ್ದಾರೆ.

ಲಾಕ್ ಡೌನ್ ನಿಂದ ಊಟವಿಲ್ಲದೆ ತೊಂದರೆಗೀಡಾದವರಿಗೆ ಆಹಾರಪೊಟ್ಟಣ ನೀಡುವ ವ್ಯವಸ್ಥೆ ಮಾಡಲಾಗಿದೆ. ರಸ್ತೆಗಳಲ್ಲಿ ಔಷಧ ಸಿಂಪಡಣೆ ಮಾಡಲಾಗುತ್ತಿದ್ದು ನಗರದ ನಾಲ್ಕು ದಿಕ್ಕುಗಳಲ್ಲಿಯೂ ಪ್ರತ್ಯೇಕ ತರಕಾರಿ ಮಾರುಕಟ್ಟೆ ತೆರೆದು ಜನರಿಗೆ ಅನುಕೂಲ ಮಾಡಿಕೊಡಲಾಗುತ್ತಿದೆ ಎಂದರು.

ನೀರು, ಮನೆಕಂದಾಯ ಪಾವತಿಸಲು ಅಂಗಡಿ ಪರವಾನಗಿ ನವೀಕರಿಸಲು ಏ.30ರವರೆಗೆ ಕಾಲಾವಕಾಶವನ್ನು ನೀಡಬೇಕೆಂದು ನಗರ ಪಾಲಿಕೆ ಆಯುಕ್ತರಿಗೆ ಪತ್ರ ಬರೆಯಲಾಗಿದೆ ಎಂದು ತಿಳಿಸಿದರು. (ಕೆ.ಎಸ್,ಎಸ್.ಎಚ್)

 

 

Leave a Reply

comments

Related Articles

error: