ಮೈಸೂರು

ಹಲವು ಷರತ್ತು ವಿಧಿಸಿ ಎಂಜಿ ರಸ್ತೆಯ ತರಕಾರಿ ಮಾರುಕಟ್ಟೆಗೆ ಅನುಮತಿ

ಮೈಸೂರು,ಏ.1:-  ಮಹಾಮಾರಿ ಕೊರೋನಾ ವೈರಸ್ ಸೋಂಕು ಹರಡುವುದನ್ನು ತಡೆಗಟ್ಟಲು, ಜನಸಂದಣಿ ಸೇರುವುದನ್ನು ತಡೆಯಲು  ಮೈಸೂರು ನಗರದ ಎಂಜಿ ರಸ್ತೆಯ ತರಕಾರಿ ಮಾರುಕಟ್ಟೆಗೆ ಅನುಮತಿ ನಿರಾಕರಿಸಲಾಗಿತ್ತು. ಇದೀಗ ಜಿಲ್ಲಾಡಳಿತ ಹಲವು ಷರತ್ತು ವಿಧಿಸಿ ಎಂಜಿ ರಸ್ತೆಯ ತರಕಾರಿ ಮಾರುಕಟ್ಟೆಗೆ ಅನುಮತಿ ನೀಡಿದೆ.

ಪ್ರತಿಯೊಬ್ಬ ವ್ಯಾಪಾರಸ್ಥರು ಮಾಸ್ಕ್ ಧರಿಸುವುದು  ಕಡ್ಡಾಯ. ಗ್ರಾಹಕರು ಮಾಸ್ಕ್ ಧರಿಸದಿದ್ದರೆ ತರಕಾರಿ ನೀಡುವಂತಿಲ್ಲ. ಬೆಳಿಗ್ಗೆ 8.30ಕ್ಕೆ ಮಾರುಕಟ್ಟೆ  ಮುಚ್ಚಬೇಕು. ಹೀಗೆ ಪ್ರಮುಖ ಷರತ್ತು ವಿಧಿಸಿ ಜಿಲ್ಲಾಡಳಿತ  ಅನುವು ಮಾಡಿಕೊಟ್ಟಿದೆ. ಈ ಹಿನ್ನಲೆಯಲ್ಲಿ ಪ್ರತಿಯೊಬ್ಬರು ಮಾಸ್ಕ್ ಧರಿಸಿ ವ್ಯಾಪಾರದಲ್ಲಿ ತೊಡಗಿರುವುದು ಕಂಡು ಬಂತು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: