ಪ್ರಮುಖ ಸುದ್ದಿಮೈಸೂರು

ಶ್ರೀಕಂಠೇಶ್ವರ ದೇವಸ್ಥಾನದ ದಾಸೋಹ ಭವನಕ್ಕೆ ಸಚಿವ ಸೋಮಣ್ಣ ಭೇಟಿ ; ಊಟೋಪಚಾರದ ಸಿದ್ಧತೆ ಪರಿಶೀಲನೆ

ಮೈಸೂರು,ಏ.1:- ವಸತಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ಇಂದು ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನದ ದಾಸೋಹ ಭವನಕ್ಕೆ ಭೇಟಿ ನೀಡಿ, ಊಟೋಪಚಾರದ ಸಿದ್ಧತೆ ಪರಿಶೀಲಿಸಿದರು.

ಈ ಸಂದರ್ಭದಲ್ಲಿ  ಸಂಸದರಾದ ಪ್ರತಾಪ್ ಸಿಂಹ, ಶಾಸಕರಾದ ಹರ್ಷವರ್ಧನ್, ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್, ಪೊಲೀಸ್ ಅಧೀಕ್ಷಕರಾದ ಸಿ.ಬಿ.ರಿಶ್ಯಂತ್ ಮತ್ತಿತರರು ಉಪಸ್ಥಿತರಿದ್ದರು.

ಈ ದಾಸೋಹ ಭವನದಲ್ಲಿ  ಆಹಾರ ತಯಾರಿಸಿ, ಪೌರಕಾರ್ಮಿಕರು, ನಿರ್ಗತಿಕರಿಗೆ ನೀಡಲಾಗುತ್ತಿದೆ ಎಂದು ತಹಶೀಲ್ದಾರ್ ಮಹೇಶ್ ಅವರು ಈ ಸಂದರ್ಭ ತಿಳಿಸಿದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: