ಮೈಸೂರು

ಮೈಸೂರು ಜಿಲ್ಲೆಯಲ್ಲಿ  ಮತ್ತೆ ಮೂವರಿಗೆ ಕೊರೋನಾ ವೈರಸ್ ಸೋಂಕು : 17ಕ್ಕೆ ಏರಿದ  ಪೀಡಿತರ ಸಂಖ್ಯೆ      

ಮೈಸೂರು,ಏ.1:-   ಮೈಸೂರು ಜಿಲ್ಲೆಯಲ್ಲಿ ಮಹಾಮಾರಿ ಕೊರೋನಾ ವೈರಸ್ ಸೋಂಕು ಮತ್ತೆ ಮೂವರಿಗೆ ತಗುಲಿರುವುದು ಪರೀಕ್ಷಾ ವರದಿಯಿಂದ ದೃಢಪಟ್ಟಿದೆ.

ಇದರಿಂದಾಗಿ ಜಿಲ್ಲೆಯಲ್ಲಿ ಕೊರೋನಾ ಪೀಡಿತರ ಸಂಖ್ಯೆ 17ಕ್ಕೇರಿದೆ. ಮೈಸೂರು ಜಿಲ್ಲೆಯ ನಂಜನಗೂಡಿನ ಜ್ಯುಬಿಲಿಯಂಟ್ ಔಷಧ ತಯಾರಿಕಾ ಕಾರ್ಖಾನೆಯ ಮತ್ತೆ ಇಬ್ಬರು ಕಾರ್ಮಿಕರಿಗೆ ಕೊರೋನಾ ವೈರಸ್ ಇರುವುದು ದೃಢಪಟ್ಟಿದೆ. ಇವರಲ್ಲಿ ಓರ್ವರು 37 ವರ್ಷದವರು, ಮತ್ತೋರ್ವರು 27 ವರ್ಷದವರಾಗಿದ್ದಾರೆ.  ಕೊರೋನಾ ವೈರಸ್ ಸೋಂಕಿತನೊಂದಿಗೆ ಸಂಪರ್ಕ ಹೊಂದಿದ್ದ ಬೆಂಗಳೂರಿನ ನಿವಾಸಿಯಾದ 33ವರ್ಷದ ವ್ಯಕ್ತಿಗೆ  ಕೂಡ ಕೊರೋನಾ ವೈರಸ್ ಇರುವುದು ದೃಢಪಟ್ಟಿದೆ. ಕೊರೋನಾ ವೈರಸ್  ಸೋಂಕಿತ ಈ ಮೂವರನ್ನು ಮೈಸೂರಿನ ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: