ಪ್ರಮುಖ ಸುದ್ದಿ

ಬಸ್ ನಿಲ್ದಾಣ ಈಗ ಮಾರುಕಟ್ಟೆ : ಅಂತರ ಕಾಯ್ದುಕೊಂಡು ತರಕಾರಿ ಖರೀದಿಸಿದ ಜನ

ರಾಜ್ಯ( ಮಡಿಕೇರಿ) ಏ.2 :- ನಗರದ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದಲ್ಲಿ ಬುಧವಾರ ಏರ್ಪಡಿಸಲಾಗಿದ್ದ ತರಕಾರಿಯನ್ನು ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಸಾರ್ವಜನಿಕರು ಖರೀದಿಸಿದರು.
ವಿಶಾಲವಾದ ಸರ್ಕಾರಿ ಬಸ್ ನಿಲ್ದಾಣದಲ್ಲಿ ತರಕಾರಿ ಮಾರುಕಟ್ಟೆ ನಡೆಯಿತು. ಸಾರ್ವಜನಿಕರ ಆರೋಗ್ಯ ರಕ್ಷಣೆಯ ಬಗ್ಗೆ ಮುನ್ನೆಚ್ಚರಿಕೆ ವಹಿಸುವ ನಿಟ್ಟಿನಲ್ಲಿ ನಗರದ ಸರ್ಕಾರಿ ಬಸ್ ನಿಲ್ದಾಣವನ್ನು ತಾತ್ಕಾಲಿಕವಾಗಿ ತರಕಾರಿ ಮಾರುಕಟ್ಟೆಯನ್ನಾಗಿ ಮಾಡಲಾಗಿದೆ.
ಕೊರೊನಾ ವ್ಶೆರಸ್ ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಜಿಲ್ಲಾಡಳಿತ ವಾರದ 3 ದಿನ ಸೋಮವಾರ, ಬುಧವಾರ ಮತ್ತು ಶುಕ್ರವಾರದಂದು ಸಾರ್ವಜನಿಕರಿಗೆ ತರಕಾರಿ, ದಿನಸಿ ಮತ್ತು ಅಗತ್ಯ ಪದಾರ್ಥಗಳನ್ನು ಖರೀದಿಸಲು ಅವಕಾಶ ನೀಡಿದೆ. ಈ ಹಿನ್ನೆಲೆಯಲ್ಲಿ ಬುಧವಾರದಂದು ನಗರದ ಬಸಿ ನಿಲ್ದಾಣದಲ್ಲಿ ಸಾರ್ವಜನಿಕರು ಸಾಮಾಜಿಕ ಅಂತರ ಕಾಯ್ದುಕೊಂಡು ತರಕಾರಿ ಖರೀದಿಸಿದರು. (ಕೆಸಿಐ,ಎಸ್.ಎಚ್)

Leave a Reply

comments

Related Articles

error: