ಮೈಸೂರು

ಮೈಸೂರು ಜಿಲ್ಲೆ ರೆಡ್ ಝೋನ್ ಘೋಷಣೆ : ಪೊಲೀಸ್ ಬಂದೋಬಸ್ತ್ ನಲ್ಲಿ ಹೆಚ್ಚಳ

ಮೈಸೂರು,ಏ.2:- ಮೈಸೂರು ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯನ್ನು ತೀವ್ರ ನಿಗಾ ವಹಿಸಲು ಸರ್ಕಾರ ರೆಡ್ ಝೋನ್ ಎಂದು ಘೋಷಿಸಿದೆ.

ಅದಕ್ಕಾಗಿ ಪೊಲೀಸ್ ಬಂದೋಬಸ್ತ್ ನ್ನು ಮತ್ತುಷ್ಟು ಹೆಚ್ಚಿಸಲಾಗಿದ್ದು, ರಸ್ತೆಯಲ್ಲಿ ಅನಗತ್ಯವಾಗಿ ಓಡಾಡುವವರ ಮೇಲೆ ತೀವ್ರ ನಿಗಾ ವಹಿಸಲಾಗಿದೆ. ಅಗತ್ಯ ವಸ್ತುಗಳು, ಆರೋಗ್ಯ ಸಮಸ್ಯೆ ಹೊರತುಪಡಿಸಿ ಅನಗತ್ಯವಾಗಿ ಸಂಚರಿಸುವವರ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳುತ್ತಿದ್ದಾರೆ. ಸರ್ಕಾರೆ ಈಗ ರೆಡ್ ಅಲರ್ಟ್ ಘೋಷಿಸಿರುವುದರಿಂದ ಪೊಲೀಸರು ಮತ್ತಷ್ಟು ಬಿಗಿ ನಿಲುವು ತಳೆಯುವ ಸಾಧ್ಯತೆಯಿದೆ ಎನ್ನಲಾಗಿದೆ.

ಜಿಲ್ಲೆಯಲ್ಲಿ ಒಟ್ಟು 17ಪ್ರಕರಣಗಳು ಬೆಳಕಿಗೆ ಬಂದಿದ್ದು ಇದರಲ್ಲಿ ನಂಜನಗೂಡಿನ ಜ್ಯುಬಿಲೆಂಟ್ ಕಾರ್ಖಾನೆಯ 17ಮಂದಿ ಕಾರ್ಮಿಕರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಪ್ರಮಾಣ ಏರಿಕೆಯಾಗುವ ಸಾಧ್ಯತೆಯಿದೆ ಎನ್ನುವ ಆತಂಕದಲ್ಲಿ ಜನರಿದ್ದಾರೆ. ಹೀಗಾಗಿ ಕಾರ್ಮಿಕರು ಹೆಚ್ಚಾಗಿ ವಾಸವಿರುವ ನಂಜನಗೂಡು ಪಟ್ಟಣವನ್ನು ಸಂಪೂರ್ಣ ಬಂದ್ ಮಾಡಲಾಗಿದ್ದು ಹೆದ್ದಾರಿಯನ್ನು ಮುಚ್ಚಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: