ಮೈಸೂರು

ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ  ಜಿಲ್ಲಾ ಪತ್ರಕರ್ತರ ಸಂಘದಿಂದ ಲಕ್ಷ ರೂ. ದೇಣಿಗೆ

ಮೈಸೂರು, ಏ.2:- ಮಹಾಮಾರಿ ಕೊರೋನಾ ವೈರಸ್ ಸೋಂಕಿನ ವಿರುದ್ಧ ಹೋರಾಡಲು    ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಇಂದು ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಒಂದು ಲಕ್ಷ ರೂ.ಗಳ ದೇಣಿಗೆ ನೀಡಲಾಯಿತು.

ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಅವರಿಗೆ ಚೆಕ್ ಅನ್ನು ಹಸ್ತಾಂತರ ಮಾಡುವ ಮೂಲಕ ಸರ್ಕಾರಕ್ಕೆ ತಲುಪಿಸಲಾಯಿತು.

ಈ ಸಂದರ್ಭ ಸಂಘದ ಅಧ್ಯಕ್ಷ ಸಿ.ಕೆ.ಮಹೇಂದ್ರ, ಪ್ರಧಾನ ಕಾರ್ಯದರ್ಶಿ ಕೆ.ಜೆ.ಲೋಕೇಶ್ ಬಾಬು, ಕಾರ್ಯದರ್ಶಿ ಬಿ.ರಾಘವೇಂದ್ರ ಮತ್ತಿತರರು  ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: