ಪ್ರಮುಖ ಸುದ್ದಿ

ಕೊರೋನಾ ಮುನ್ನೆಚ್ಚರಿಕೆ : ಆರು ಮಂದಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ

ರಾಜ್ಯ( ಮಡಿಕೇರಿ) ಏ.2 :- ಕೊರೋನಾ ಸೋಂಕು ತಡೆಯವ ನಿಟ್ಟಿನಲ್ಲಿ ಕೊಡಗು ಜಿಲ್ಲಾಡಳಿತ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದು, ಸೋಂಕು ದೃಢಪಟ್ಟ ಒಬ್ಬರು ಹಾಗೂ ಶಂಕಿತ ಐವರನ್ನು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿದೆ.
ವಿದೇಶದಿಂದ ಬಂದವರ ಮೇಲೆ ನಿಗಾ ಇರಿಸಲಾಗಿದ್ದು, ಇಂದು ಸಂಜೆಯವರೆಗೆ ಮಡಿಕೇರಿ ತಾಲ್ಲೂಕಿನಲ್ಲಿ 156 ವಿರಾಜಪೇಟೆ ತಾಲೂಕಿನಲ್ಲಿ 156 ಮತ್ತು ಸೋಮವಾರಪೇಟೆ ತಾಲ್ಲೂಕಿನಲ್ಲಿ 123 ಜನರನ್ನು ಪತ್ತೆ ಹಚ್ಚಲಾಗಿದೆ. ಈ ಪೈಕಿ 381 ಜನರನ್ನು ಮುನ್ನೆಚ್ಚರಿಕಾ ಕ್ರಮವಾಗಿ ಅವರವರ ಮನೆಗಳಲ್ಲಿಯೇ ಸಂಪರ್ಕ ತಡೆಯನ್ನು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.
ಇಲ್ಲಿಯವರೆಗೆ ಒಟ್ಟು 51 ಗಂಟಲು ದ್ರವ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯ ಪರೀಕ್ಷೆಗೆ ಕಳುಹಿಸಲಾಗಿದ್ದು, ಅದರಲ್ಲಿ 01 ಪ್ರಕರಣ ದೃಢ ಪಟ್ಟಿದ್ದು, 45 ಪ್ರಕರಣಗಳಲ್ಲಿ ನೆಗೆಟಿವ್ ವರದಿ ಬಂದಿರುತ್ತದೆ. ಐದು ಪ್ರಕರಣಗಳಲ್ಲಿ ವರದಿಯನ್ನು ನಿರೀಕ್ಷಿಸಲಾಗಿದೆ. ಇವರು ಸೇರಿದಂತೆ ಸೋಂಕು ದೃಢಪಟ್ಟ ಐವರನ್ನು ಜಿಲ್ಲಾಸ್ಪತ್ರೆಯಲ್ಲಿ ಪ್ರತ್ಯೇಕ ಕೊಠಡಿಯಲ್ಲಿಟ್ಟು ಉಪಚರಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ. (ಕೆಸಿಐ,ಎಸ್.ಎಚ್)

Leave a Reply

comments

Related Articles

error: