ಪ್ರಮುಖ ಸುದ್ದಿ

ಎರಡು ತಿಂಗಳ ಪಡಿತರ ವಿತರಣೆಗೆ ಕ್ರಮ

ರಾಜ್ಯ( ಮಡಿಕೇರಿ) ಏ.3 :- ಕೋವಿಡ್-19 ರ ಸಂಬಂಧ ಮುಂಜಾಗ್ರತಾ ಕ್ರಮವಾಗಿ ದೇಶಾದ್ಯಂತ ಲಾಕ್‍ಡೌನ್ ಆಗಿದ್ದು, ಈ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ಎ.ಎ.ವೈ ಮತ್ತು ಬಿ.ಪಿ.ಎಲ್ ಪಡಿತರ ಚೀಟಿಯನ್ನು ಹೊಂದಿರುವ 3,37,658 ಫಲಾನುಭವಿಗಳಿಗೆ ಮತ್ತು ಜಿಲ್ಲೆಯಲ್ಲಿರುವ ರಾಜ್ಯದ ಇತರೆ ಜಿಲ್ಲೆಗಳ ಪಡಿತರ ಚೀಟಿದಾರರಿಗೆ ಮುಂಗಡವಾಗಿ ಏಪ್ರಿಲ್ ಮತ್ತು ಮೇ ಎರಡು ತಿಂಗಳ ಪಡಿತರವನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ವತಿಯಿಂದ ನ್ಯಾಯಬೆಲೆ ಅಂಗಡಿಗಳ ಮೂಲಕ ಪೂರೈಸಲಾಗುತ್ತಿದೆ. ಪಡಿತರ ಚೀಟಿದಾರರು ಇದರ ಸದುಪಯೋಗ ಪಡೆದುಕೊಳ್ಳಲು ಜಿಲ್ಲಾಡಳಿತ ಕೋರಿದೆ. (ಕೆಸಿಐ,ಎಸ್.ಎಚ್)

Leave a Reply

comments

Related Articles

error: