ಪ್ರಮುಖ ಸುದ್ದಿ

ಕೊರೋನಾ ಸೋಂಕು : ಐವರ ಪರೀಕ್ಷಾ ವರದಿ ನಿರೀಕ್ಷಿಸಲಾಗುತ್ತಿದೆ

ರಾಜ್ಯ( ಮಡಿಕೇರಿ) ಏ.3 :- ಜಿಲ್ಲೆಯಿಂದ ವಿದೇಶಗಳಿಗೆ ಹೋಗಿ ಹಿಂತಿರುಗಿ ಬಂದಿರುವವರನ್ನು ಪತ್ತೆ ಹಚ್ಟಿ ತಪಾಸಣೆ ಮಾಡುವ ಕಾರ್ಯವನ್ನು ಮುಂದುವರೆಸಲಾಗಿದೆ. ಇಂದು ಸಂಜೆಯವರೆಗೆ ಮಡಿಕೇರಿ ತಾಲ್ಲೂಕಿನಲ್ಲಿ 180 ವಿರಾಜಪೇಟೆ ತಾಲ್ಲೂಕಿನಲ್ಲಿ 157 ಮತ್ತು ಸೋಮವಾರಪೇಟೆ ತಾಲ್ಲೂಕಿನಲ್ಲಿ 124 ಜನರನ್ನು ಪತ್ತೆ ಹಚ್ಚಲಾಗಿದೆ. ಈ ಪೈಕಿ 388 ಜನರನ್ನು ಮುನ್ನೆಚ್ಚರಿಕಾ ಕ್ರಮವಾಗಿ ಅವರವರ ಮನೆಗಳಲ್ಲಿಯೇ ಸಂಪರ್ಕ ತಡೆಯನ್ನು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.
ಇಲ್ಲಿಯವರೆಗೆ ಒಟ್ಟು 51 ಗಂಟಲು ದ್ರವ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯ ಪರೀಕ್ಷೆಗೆ ಕಳುಹಿಸಲಾಗಿದೆ. ಅದರಲ್ಲಿ 1 ಪ್ರಕರಣ ದೃಢ ಪಟ್ಟಿದ್ದು, 45 ಪ್ರಕರಣಗಳಲ್ಲಿ ನೆಗೆಟಿವ್ ವರದಿ ಬಂದಿರುತ್ತದೆ. 5 ಪ್ರಕರಣಗಳಲ್ಲಿ ವರದಿಯನ್ನು ನಿರೀಕ್ಷಿಸಲಾಗಿದೆ. ಪ್ರಸ್ತುತ ಸೋಂಕು ದೃಢಪಟ್ಟ 1 ಪ್ರಕರಣ ಮತ್ತು 5 ಸೋಂಕು ಶಂಕಿತ ಪ್ರಕರಣಗಳು ಸೇರಿದಂತೆ 6 ಮಂದಿಯನ್ನು ಜಿಲ್ಲಾಸ್ಪತ್ರೆಯಲ್ಲಿ ಪ್ರತ್ಯೇಕ ಕೊಠಡಿಯಲ್ಲಿಟ್ಟು ಉಪಚರಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ. (ಕೆಸಿಐ,ಎಸ್.ಎಚ್)

Leave a Reply

comments

Related Articles

error: