ಮೈಸೂರು

ಜ್ಯುಬಿಲಿಯೆಂಟ್  ಕಾರ್ಖಾನೆ ಕಾರ್ಮಿಕರ ಕೊರೋನಾ ವೈರಸ್ ಸೋಂಕು ಪ್ರಕರಣ : ಆತಂಕಕಾರಿ ವಿಷಯ ಬಹಿರಂಗಪಡಿಸಿದ ಡಿಸಿ

ಮೈಸೂರು,ಏ.3:-  ನಂಜನಗೂಡು ಜ್ಯುಬಿಲಿಯೆಂಟ್  ಕಾರ್ಖಾನೆ ಕಾರ್ಮಿಕರ ಕೊರೋನಾ ವೈರಸ್ ಸೋಂಕು ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಆತಂಕಕಾರಿ ವಿಚಾರವೊಂದನ್ನು  ಬಹಿರಂಗಪಡಿಸಿದ್ದಾರೆ.

ಮೈಸೂರಿನಲ್ಲಿಂದು ಮಾಹಿತಿ ನೀಡಿದ ಅವರು ಸೋಂಕಿತರ ಸಂಪರ್ಕ ವ್ಯಕ್ತಿಗಳ ಸ್ಯಾಂಪಲ್ ಪರೀಕ್ಷೆ ಮಾಡಲೇಬೇಕು. ಸದ್ಯ ಪ್ರೈಮರಿ ಸಂಪರ್ಕ ಹೊಂದಿದ 223  ಜನರ ಸ್ಯಾಂಪಲ್ ಪರೀಕ್ಷೆ ನಡೆಯಬೇಕಿದೆ. ನಂಜನಗೂಡಿನ 19 ಕೇಸ್ ಪ್ರೈಮರಿ ಸಂಪರ್ಕದ ಹುಡುಕಾಟವು ಮುಂದುವರೆದಿದೆ. ಸಂಪರ್ಕಿತರ ಸಂಖ್ಯೆ ನೂರೂ ಆಗಬಹುದು, ಸಾವಿರವೂ ಆಗಬಹುದು. ಎಲ್ಲ ಸ್ಯಾಂಪಲ್ ಪರೀಕ್ಷೆಗೆ 12 ದಿನ ಕಳೆಯಬೇಕು. ಇಲ್ಲವಾದಲ್ಲಿ ಮತ್ತೊಮ್ಮೆ ಪರೀಕ್ಷೆ ಮಾಡಬೇಕಾಗುತ್ತದೆ. 12 ದಿನ ಕಳೆದ ಮೇಲೆಯೆ ಸೋಂಕಿನ ನಿಖರ ಮಾಹಿತಿ ತಿಳಿಯಲಿದೆ. ನಂಜನಗೂಡು ಪ್ರಕರಣದ ಇನ್ನೂ ನೂರಾರು ಸ್ಯಾಂಪಲ್ ಪರೀಕ್ಷೆ ಮಾಡಬೇಕಿದೆ. ಎಲ್ಲರ ವರದಿ ಬಂದ ನಂತರ ಮಾಹಿತಿ ನೀಡುತ್ತೇವೆ ಎಂದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: