ಮೈಸೂರು

ನಾಳೆ ನಂಜನಗೂಡು ಪಂಚ‌ ಮಹಾರಥೋತ್ಸವ ನಡೆಯಲ್ಲ : ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಸ್ಪಷ್ಟನೆ

ಮೈಸೂರು,ಏ.3:- ನಾಳೆ ನಂಜನಗೂಡು ಪಂಚ‌ ಮಹಾರಥೋತ್ಸವ ನಡೆಯಲ್ಲ ಎಂದು ಮೈಸೂರು ಜಿಲ್ಲಾಧಿಕಾರಿ  ಅಭಿರಾಮ್ ಜಿ.ಶಂಕರ್  ಸ್ಪಷ್ಟಪಡಿಸಿದರು.

ಈ ಕುರಿತು ಇಂದು ಮಾಹಿತಿ ನೀಡಿದ ಅವರು ಧಾರ್ಮಿಕ ಕಾರ್ಯಕ್ರಮಕ್ಕೆ ಸೂಚನೆ ಕೊಡಲಾಗಿದೆ. ದೇವಾಲಯದ ಒಳಗೆ ಯಾವುದೇ ಪೂಜೆ ಇದ್ದರೂ ಅರ್ಚಕರ ಸಾಮಾಜಿಕ ಅಂತರದಲ್ಲಿ  ನೆರವೇರಲಿದೆ. ರಥ ಎಳೆಯುವುದು ಅಥವಾ ರಥಕ್ಕೆ ಉತ್ಸವ ಮೂರ್ತಿ ಪ್ರತಿಷ್ಠಾಪಿಸುವಂತಿಲ್ಲ. ಎಲ್ಲರೂ ಮನೆಯಿಂದಲೇ ದೇವರನ್ನು ಪ್ರಾರ್ಥಿಸಿ. ಯಾರೂ ದೇವಾಲಯದ ಬಳಿ ಬರದೆ ಹೊರಗೆ ಓಡಾಡದೇ ಇರಿ ಎಂದಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: