ಮೈಸೂರು

ಕೊರೋನಾ ಹಿನ್ನೆಲೆ : ಜಿಲ್ಲಾಡಳಿತ ಕೈಗೊಂಡ ಕ್ರಮ ಕುರಿತು ಮಾಹಿತಿ ಪಡೆದುಕೊಂಡ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ

ಮೈಸೂರು,ಏ.3:- ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಇಂದು ಮೈಸೂರಿಗೆ ಭೇಟಿ ನೀಡಿ ಕೊರೋನಾ ಹಿನ್ನೆಲೆಯಲ್ಲಿ ಉಂಟಾಗಿರುವ ಪರಿಸ್ಥಿತಿ ಕುರಿತು ಪರಿಶೀಲನೆ ನಡೆಸಿದರು.

ಜಿಲ್ಲಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದ ಸಿದ್ದರಾಮಯ್ಯ ಅವರು, ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದುಕೊಂಡರು.

ಕೊರೋನಾ ಸೋಂಕಿಗೆ ಪ್ರಮುಖ ಕಾರಣವಾದ ಜ್ಯುಬಿಲಿಯೆಂಟ್ ಕಾರ್ಖಾನೆ, ಕಾರ್ಮಿಕರ ಪರಿಸ್ಥಿತಿ, ರೈತರಿಗೆ ಉಂಟಾಗಿರುವ ಸಮಸ್ಯೆ, ಕರ್ನಾಟಕ, ಕೇರಳ ಗಡಿ ವಿಚಾರದ ಬಗ್ಗೆಯೂ ಸಿದ್ದರಾಮಯ್ಯ ಅವರು ಅಧಿಕಾರಿಗಳ ಜೊತೆ ಚರ್ಚಿಸಿದರು.

ಜಿಲ್ಲಾಧಿಕಾರಿ ಅಭಿರಾಮ್ ಶಂಕರ್, ಜಿಲ್ಲಾ ಪಂಚಾಯತ್ ಸಿಇಒ ಪ್ರಶಾಂತ್ ಕುಮಾರ್ ಮಿಶ್ರ, ಅಪರ ಜಿಲ್ಲಾಧಿಕಾರಿ ಪೂರ್ಣಿಮಾ, ಹೆಚ್ಚುವರಿ  ಪೊಲೀಸ್ ಅಧೀಕ್ಷಕಿ ಸ್ನೇಹಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: