ದೇಶಪ್ರಮುಖ ಸುದ್ದಿ

ಬಿರೇನ್ ಸಿಂಗ್ ಪ್ರಮಾಣ ವಚನ; ಮಣಿಪುರದಲ್ಲಿ ಪ್ರಪ್ರಥಮ ಬಿಜೆಪಿ ನೇತೃತ್ವದ ಸರ್ಕಾರ

ಇಂಫಾಲ್: ಮಣಿಪುರ ಮುಖ್ಯಮಂತ್ರಿಯಾಗಿ ಎನ್. ಬಿರೇನ್ ಸಿಂಗ್ ಅವರು ಬುಧವಾರ ಪ್ರಮಾಣವಚನ ಸ್ವೀಕರಿದರು. ಈ ಮೂಲಕ ಮಣಿಪುರದಲ್ಲಿ ಬಿಜೆಪಿ ಪ್ರಥಮ ಬಾರಿಗೆ ಸರ್ಕಾರ ರಚಿಸಿದೆ. ನ್ಯಾಷನಲ್ ಪೀಪಲ್ಸ್ ಪಾರ್ಟಿ – ಎನ್‍ಪಿಪಿಯ ವೈ.ಜಾಯ್ ಕುಮಾರ್ ಉಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.

ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲೆ ನಜ್ಮಾ ಹೆಫ್ತುಲ್ಲಾ ಅವರು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಎಂಟು ಮಂದಿ ಸಚಿವರಿಗೆ ಪ್ರಮಾಣ ವಚನವನ್ನು ಬೋಧಿಸಿದರು.

ನೂತನ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂಧಿಸಿದ್ದಾರೆ. ಮಣಿಪುರದ ಅಭಿವೃದ್ಧಿಗಾಗಿ ಹೊಸ ಸರ್ಕಾರವು ಅವಿರತವಾಗಿ ಶ್ರಮಿಸುವುದೆಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

(ಎನ್‍.ಬಿ.ಎನ್‍)

Leave a Reply

comments

Related Articles

error: