ಮೈಸೂರು

ಲಾಕ್ ಡೌನ್ ಇದ್ದರೂ ಜೂಜಾಟ : ಇಬ್ಬರ ಬಂಧನ ; ನಾಲ್ವರು ಪರಾರಿ

ಮೈಸೂರು,ಏ.4:- ಲಾಕ್ ಡೌನ್ ಆದೇಶ ಉಲ್ಲಂಘಿಸಿ ಸುಣ್ಣದಕೇರಿಯ ಸಿದ್ದಪ್ಪಾಜಿ ದೇವಸ್ಥಾನದ ಬಳಿಯ ರಸ್ತೆಯಲ್ಲಿ ಜೂಜಾಡುತ್ತಿದ್ದ  ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದು, ನಾಲ್ವರು ಪರಾರಿಯಾಗಿದ್ದಾರೆ.

ಕೊರೋನಾ ವೈರಸ್ ಸೋಂಕು ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಗುಂಪು ಸೇರುವುದನ್ನು ನಿರ್ಬಂಧಿಸಿ 144 ಸಿಆರ್ ಪಿಸಿ ನಿಷೇಧಾಜ್ಞೆ ಜಾರಿ ಮಾಡಲಾಗಿದ್ದು ಇದನ್ನು ಮೀರಿ ಆರು ಜನರು ಗುಂಪುಗೂಡಿ ಅಂದರ್ ಬಾಹರ್ ಆಡುತ್ತಿರುವ ವೇಳೆ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿ ಬಂಧಿತರಿಂದ 9330ರೂ.ನಗದು, ಎರಡು ಮೊಬೈಲ್ ವಶಪಡಿಸಿಕೊಳ್ಳಲಾಗಿದೆ.

ಕೃಷ್ಣರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: