ಮೈಸೂರು

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಕೊರೋನಾ ವೈರಸ್ ಜಾಗೃತಿ ಅಭಿಯಾನ

ಮೈಸೂರು,ಏ.4:-  ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮೈಸೂರು ಜಿಲ್ಲೆಯ ಎಲ್ಲಾ ತಾಲೂಕು ಕಾನೂನು ಸೇವೆಗಳ ಸಮಿತಿ ವತಿಯಿಂದ ಜಿಲ್ಲೆಯಲ್ಲಿ ಕೊರೋನಾ ಸೋಂಕು ಹರಡದಂತೆ ನಿಯಂತ್ರಿಸಲು ಸಾರ್ವಜನಿಕರು ಅನುಸರಿಸಬೇಕಾದ ಕ್ರಮಗಳ ಕುರಿತು ಜಿಲ್ಲೆಯ ಎಲ್ಲಾ ಹಳ್ಳಿ, ಗ್ರಾಮೀಣ ಪ್ರದೇಶಗಳಲ್ಲಿ ಆಟೋ ರಿಕ್ಷಾ, ಇತರೆ ವಾಹನಗಳಲ್ಲಿ ಧ್ವನಿ ವರ್ಧಕಗಳನ್ನು ಅಳವಡಿಸಿ ಅರೆಕಾಲಿಕ ಸ್ವಯಂ ಸೇವಕರು ಮತ್ತು ಪ್ಯಾನಲ್ ವಕೀಲರ ಮುಖಾಂತರ ಮಾರ್ಚ್ 31 ರಿಂದ ಜಾಗೃತಿಯನ್ನು ಮೂಡಿಸಲಾಗುತ್ತಿದೆ.

ವಿಶ್ವದಾದ್ಯಂತ ಕೊರೋನಾ ವೈರಸ್ ಹರಡುತ್ತಿದ್ದು, ಸಮಾಜದ  ಸ್ವಾಸ್ಥ್ಯವನ್ನು ಕಾಪಾಡಲು ಮುಂಜಾಗ್ರತೆಯಾಗಿ ಸರ್ಕಾರ ನೀಡಿರುವ ಎಲ್ಲಾ ಸೂಚನೆಗಳನ್ನು ಪ್ರತಿಯೊಬ್ಬರೂ ಪಾಲಿಸುವುದು. ಅಲ್ಲದೇ ತಿಳುವಳಿಕೆ ನೀಡಲು ಬರುವವರಿಗೆ ಸಾರ್ವಜನಿಕರು ಸಹಕರಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಸ್.ಕೆ.ವಂಟಿಗೋಡಿ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: