ಪ್ರಮುಖ ಸುದ್ದಿ

ಮತ್ತಷ್ಟು ಸಮಸ್ಯೆಗಳು ಎದುರಾದಲ್ಲಿ ನಿಭಾಯಿಸಲು ಸಿದ್ಧರಾಗಿರಿ : ಉಸ್ತುವಾರಿ ಕಾರ್ಯದರ್ಶಿ ಅನ್ಬುಕುಮಾರ್ ಸೂಚನೆ

ರಾಜ್ಯ( ಮಡಿಕೇರಿ) ಏ.4 :- ಕೋವಿಡ್-19 ಸಂಬಂಧ ಜಿಲ್ಲೆಯ ಪರಿಸ್ಥಿತಿ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ.ಅನ್ಬುಕುಮಾರ್ ಅವರು ಮಾಹಿತಿ ಪಡೆದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಅವರಿಂದ ಮಾಹಿತಿ ಪಡೆದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು, ಜಿಲ್ಲೆಯಲ್ಲಿ ಕೊರೊನಾ ವೈರಸ್ ಪರಿಸ್ಥಿತಿ, ಆಸ್ಪತ್ರೆ ಸೌಲಭ್ಯಗಳು, ಸಾರಿಗೆ ಸಂಪರ್ಕ, ವೈದ್ಯರು ಮತ್ತು ಶುಶ್ರೂಶಕರ ನಿಯೋಜನೆ, ಸಾರ್ವಜನಿಕರಿಗೆ ವೈದ್ಯಕೀಯ ಸೇವೆಗಳು ಮತ್ತಿತರ ಬಗ್ಗೆ ಮಾಹಿತಿ ಪಡೆದರು.
ಜಿಲ್ಲೆಯ ಬಿಪಿಎಲ್, ಎಪಿಎಲ್, ಅಂತ್ಯೋದಯ ಪಡಿತರ ಚೀಟಿದಾರರು, ಕೂಲಿ ಕಾರ್ಮಿಕರು, ವಲಸೆ ಕಾರ್ಮಿಕರು, ಹೀಗೆ ಎಲ್ಲಾ ಕುಟುಂಬದವರಿಗೆ ಆಹಾರ ತಲುಪಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೂಚಿಸಿದರು.
ಜಿಲ್ಲಾ ಆಸ್ಪತ್ರೆಗೆ ಹೆಚ್ಚುವರಿ ವೆಂಟಿಲೇಟರ್‍ಗಳನ್ನು ತರಿಸಿಕೊಳ್ಳಬೇಕು, ಯಾವುದೇ ರೀತಿಯ ಸಮಸ್ಯೆಗಳು ಎದುರಾದಲ್ಲಿ ನಿಭಾಯಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು ಹೇಳಿದರು.
ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುವ ಎಲ್ಲಾ ವೈದ್ಯರು, ಶುಶ್ರೂಶಕರು ಮತ್ತು ಪೊಲೀಸರಿಗೆ ಮಾಸ್ಕ್, ಸ್ಯಾನಿಟೈಸರ್ ಮತ್ತು ಗ್ಲೌಸ್ ವಿತರಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶೀ ವಿ.ಅನ್ಬುಕುಮಾರ್ ಅವರು ಸೂಚಿಸಿದರು.
ಸರ್ಕಾರದ ನಿರ್ದೇಶನದಂತೆ ಜಿಲ್ಲೆಯಲ್ಲಿ ಲಾಕ್‍ಡೌನ್ ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದ್ದು, ಇದೇ ರೀತಿ ಕಾಪಾಡಿಕೊಂಡು ಹೋಗಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು ತಿಳಿಸಿದರು.
ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಗಮನಹರಿಸಬೇಕು ಎಂದು ಇದೇ ಸಂಧರ್ಭದಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಸಲಹೆ ಮಾಡಿದರು.
ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪನ್ನೇಕರ್, ಜಿ.ಪಂ.ಸಿಇಒ ಕೆ.ಲಕ್ಷ್ಮಿಪ್ರಿಯ ಅವರು ಜಿಲ್ಲೆಯಲ್ಲಿ ಕೋವಿಡ್-19 ಬಗ್ಗೆ ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ನೀಡಿದರು.
ಪ್ರೊಬೆಷನರಿ ಐಎಎಸ್ ಅಧಿಕಾರಿ ಯುಕೇಶ್ ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸ್ನೇಹ, ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕರಾದ ಡಾ.ಕಾರ್ಯಪ್ಪ, ಜಿ.ಪಂ.ಯೋಜನಾ ನಿರ್ದೇಶಕರಾದ ಶ್ರೀಕಂಠಮೂರ್ತಿ, ಪೌರಾಯುಕ್ತರಾದ ಎಂ.ಎಲ್ ರಮೇಶ್, ಡಿವೈಎಸ್‍ಪಿ ದಿನೇಶ್ ಕುಮಾರ್, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಉಪ ನಿರ್ದೆಶಕರಾದ ಗೌರವ್ ಕುಮಾರ್ ಶೆಟ್ಟಿ, ವೈದ್ಯಕೀಯ ಕಾಲೇಜಿನ ಅಧೀಕ್ಷಕರಾದ ಡಾ.ಲೋಕೇಶ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಶಿವಕುಮಾರ್, ವೈದ್ಯಕೀಯ ಕಾಲೇಜಿನ ಡಾ.ಮಂಜುನಾಥ್, ಡಾ.ವಿಶಾಲ್, ನೋಡಲ್ ಅಧಿಕಾರಿಗಳಾದ ಶ್ರೀನಿವಾಸ್, ಅನನ್ಯ ವಾಸುದೇವ್ ಇತರರು ಹಾಜರಿದ್ದರು. (ಕೆಸಿಐ,ಎಸ್.ಎಚ್)

Leave a Reply

comments

Related Articles

error: