ಪ್ರಮುಖ ಸುದ್ದಿ

ದೆಹಲಿಯಿಂದ ಬಂದವರ ಸಂಖ್ಯೆ ಏರಿಕೆ : 14 ಮಂದಿಯ ಮೇಲೆ ಜಿಲ್ಲಾಸ್ಪತ್ರೆಯಲ್ಲಿ ನಿಗಾ

ರಾಜ್ಯ( ಮಡಿಕೇರಿ) ಏ.6 :- ದೆಹಲಿಯ ಧಾರ್ಮಿಕ ಸಭೆಗೆ ಹೋಗಿ ಬಂದಿರುವ ಇನ್ನೂ ಇಬ್ಬರನ್ನು ಪತ್ತೆ ಹಚ್ಚಲಾಗಿದ್ದು, ಇದೀಗ ಜಿಲ್ಲೆಯಿಂದ ದೆಹಲಿಗೆ ತೆರಳಿದವರ ಸಂಖ್ಯೆ 24ಕ್ಕೆ ಏರಿದಂತಾಗಿದೆ.
ಕೊಡಗು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಅಧಿಕೃತವಾಗಿ ಇದನ್ನು ಪ್ರಕಟಿಸಿದ್ದಾರೆ.
ದೆಹಲಿಯ ಧಾರ್ಮಿಕ ಸಭೆಗೆ ತೆರಳಿದವರ ಪೈಕಿ 5 ಮಂದಿ ದೆಹಲಿಯಲ್ಲೇ ಕ್ವಾರಂಟೈನ್‍ನಲ್ಲಿದ್ದು, ಇತರ 5 ಮಂದಿ ಹೊರ ಜಿಲ್ಲೆಗಳಲ್ಲಿ ವಾಸವಿದ್ದು, ಈ ಬಗ್ಗೆ ಸಂಬಂಧಿಸಿದ ಜಿಲ್ಲೆಗಳಿಗೆ ಮಾಹಿತಿ ನೀಡಲಾಗಿದೆ. ಉಳಿದ 14 ಜನರನ್ನು ಜಿಲ್ಲಾಸ್ಪತ್ರೆಯ ಐಸೊಲೇಷನ್ ವಾರ್ಡ್‍ನಲ್ಲಿ ಇರಿಸಲಾಗಿದ್ದು, ಇವರಲ್ಲಿ ಕೊರೋನಾ ವೈರಸ್‍ನ ಯಾವುದೇ ಲಕ್ಷಣಗಳು ಕಂಡು ಬಂದಿಲ್ಲ .ಆದರೂ ಅವರ ಗಂಟಲು ದ್ರವ ಮಾದರಿಗಳನ್ನು ತೆಗೆದು ಪರೀಕ್ಷೆಗೆ ಕಳುಹಿಸಲು ಕ್ರಮವಹಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಶಿಕ್ಷಾರ್ಹ ಅಪರಾಧ
ಕೊರೋನಾ ವೈರಸ್(ಕೋವಿಡ್-19)ಗೆ ಸಂಬಂಧಿಸಿದಂಗೆ ಯಾವುದೇ ತಪ್ಪು ಮಾಹಿತಿ ಅಥವಾ ಯಾವುದೇ ಕೋಮಿನ ಬಗ್ಗೆ ಪರ-ವಿರೋಧವಾಗಿ ಸಾಮಾಜಿಕ ಜಾಲತಾಣದಲ್ಲಿ ಚಿತ್ರದ ಮೂಲಕವಾಗಲಿ, ಅಥವಾ ಧ್ವನಿಸುರುಳಿಯ ಮೂಲಕವಾಗಲಿ ಮಾಹಿತಿಗಳನ್ನು ಹರಿಯಬಿಡುವುದು ಶಿಕ್ಷಾರ್ಹ ಅಪರಾಧವಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪನ್ನೇಕರ್ ತಿಳಿಸಿದ್ದಾರೆ. (ಕೆಸಿಐ,ಎಸ್.ಎಚ್)

Leave a Reply

comments

Related Articles

error: