ಪ್ರಮುಖ ಸುದ್ದಿ

ಅನಾವಶ್ಯಕವಾಗಿ ರಸ್ತೆಗಿಳಿದ 117 ವಾಹನಗಳು ಪೊಲೀಸ್ ವಶಕ್ಕೆ

ರಾಜ್ಯ( ಮಡಿಕೇರಿ) ಏ.6 :- ಕೊರೋನಾ ವೈರಸ್ ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಏ.14ರವರೆಗೆ ಲಾಕ್‍ಡೌನ್ ಘೋಷಿಸಿದ್ದರೂ ಅನೇಕರು ಇದರ ಮಹತ್ವವನ್ನು ಅರಿಯದೆ ರಸ್ತೆಯಲ್ಲಿ ಬೇಕಾಬಿಟ್ಟಿಯಾಗಿ ತಿರುಗಾಡುತ್ತಿದ್ದಾರೆ. ಈ ರೀತಿ ಅನಾವಶ್ಯಕವಾಗಿ ತಿರುಗಾಡುವ ವಾಹನಗಳ ಸಂಚಾರವನ್ನು ನಿಯಂತ್ರಿಸುವ ಸಲುವಾಗಿ ಕಾರ್ಯಾಚರಣೆ ನಡೆಸಿರುವ ಪೊಲೀಸರು 73 ದ್ವಿಚಕ್ರ, 39 ಚತುಶ್ಚಕ್ರ ಹಾಗೂ 5 ಆಟೋ ರಿಕ್ಷಾಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್.ಡಿ.ಪನ್ನೇಕರ್ ಅವರ ಮಾರ್ಗದರ್ಶನದಲ್ಲಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.
ಇನ್ನು ಮುಂದೆ ಅನಾವಶ್ಯಕವಾಗಿ ರಸ್ತೆಗಿಳಿಯುವ ವಾಹನ ಸವಾರರ ವಿರುದ್ಧ ಕಾನೂನು ರೀತ್ಯ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತಿಳಿಸಿದ್ದಾರೆ.
ಶಾಂತಿ ಸಭೆ: ಕೊರೋನಾ ವೈರಸ್ ಸಂಬಂಧಿಸಿದಂತೆ ಯಾವುದೇ ತಪ್ಪು ಮಾಹಿತಿ ಅಥವಾ ಯಾವುದೇ ಕೋಮಿನ ಬಗ್ಗೆ ಪರ ಅಥವಾ ವಿರೋಧವಾಗಿ ಯಾವುದೇ ಸಾಮಾಜಿಕ ಜಾಲತಾಣಗಳಲ್ಲಿ ಚಿತ್ರದ ಮೂಲಕವಾಗಲೀ ಅಥವಾ ಧ್ವನಿಸುರುಳಿಯ ರೂಪದಲ್ಲಾಗಲೀ ಮಾಹಿತಿಗಳನ್ನು ಹರಿಯ ಬಿಡುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಈ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ಮಟ್ಟದಲ್ಲಿ ಶಾಂತಿ ಸಭೆ ನಡೆಸಿ ಎಲ್ಲಾ ಕೋಮಿನ ಮುಖಂಡರನ್ನು ಠಾಣೆಗೆ ಆಹ್ವಾನಿಸಿ ಈ ಬಗ್ಗೆ ಜನರಿಗೆ ತಿಳುವಳಿಕೆ ನೀಡುವಂತೆ ಕೋರಲಾಯಿತು ಹಾಗೂ ಕೊರೋನಾ ವೈರಸ್‍ನ ಹರಡುವಿಕೆಯನ್ನು ತಪ್ಪಿಸುವ ನಿಟ್ಟಿನಲ್ಲಿ ಕೊಡಗು ಜಿಲ್ಲಾ ಪೊಲೀಸರೊಂದಿಗೆ ಸಹಕರಿಸುವಂತೆ ಕೋರಲಾಯಿತು. (ಕೆಸಿಐ,ಎಸ್.ಎಚ್)

Leave a Reply

comments

Related Articles

error: