ಕರ್ನಾಟಕಪ್ರಮುಖ ಸುದ್ದಿ

ಹಾಸ್ಯ ನಟ ಬುಲೆಟ್ ಪ್ರಕಾಶ್ ಸ್ಥಿತಿ ಗಂಭೀರ

ಬೆಂಗಳೂರು,ಏ.6-ಹಾಸ್ಯ ನಟ ಬುಲೆಟ್ ಪ್ರಕಾಶ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರಿಗೆ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಆರೋಗ್ಯ ಸಮಸ್ಯೆಯಿಂದಾಗಿ ಎರಡು ದಿನಗಳ ಹಿಂದೆ ಬುಲೆಟ್ ಪ್ರಕಾಶ್ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ವೆಂಟಿಲೇಟರ್ ನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಬುಲೆಟ್ ಪ್ರಕಾಶ್ ಅವರು ಕಿಡ್ನಿ ವೈಫಲ್ಯ ಮತ್ತು ಸೋಂಕಿನಿಂದ ಬಳಲುತ್ತಿದ್ದಾರೆ.

ಮೊನ್ನೆಯಷ್ಟೆ ಬುಲೆಟ್ ಪ್ರಕಾಶ್ ಅವರ ಪುತ್ರ, ತಂದೆಯವರಿಗೆ ಗ್ಯಾಸ್ಟ್ರಿಕ್ ಸಮಸ್ಯೆ ಆಗಿದೆ ಅಷ್ಟೆ ಯಾವುದೇ ಸಮಸ್ಯೆ ಇಲ್ಲ ಎಂದಿದ್ದರು. ಆದರೀಗ ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡುತ್ತಿರುವುದಾಗಿ ಆಸ್ಪತ್ರೆ ಮೂಲಗಳು ಹೇಳಿವೆ. (ಎಂ.ಎನ್)

Leave a Reply

comments

Related Articles

error: