ಮೈಸೂರು

ಅಮೇರಿಕದ ಮೃಗಾಲಯದಲ್ಲಿ ಹುಲಿಯೊಂದಕ್ಕೆ ಕೊರೋನಾ ಸೋಂಕು : ಮೈಸೂರು ಮೃಗಾಲಯದಲ್ಲಿಯೂ ಕಟ್ಟೆಚ್ಚರ

ಮೈಸೂರು,ಏ.6:- ಅಮೇರಿಕದ ಮೃಗಾಲಯದಲ್ಲಿ ಹುಲಿಯೊಂದಕ್ಕೆ ಕೊರೋನಾ ಸೋಂಕು ದೃಢ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನ ಚಾಮರಾಜೇಂದ್ರ ಮೃಗಾಲಯದಲ್ಲಿಯೂ ಮುಂಜಾಗ್ರತೆವಹಿಸಲಾಗಿದೆ.

ಈ ಕುರಿತು ದೂರವಾಣಿ ಮೂಲಕ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮೃಗಾಲಯ ನಿರ್ದೇಶಕ ಅಜಿತ್ ಕುಲಕರ್ಣಿ  ಮೃಗಾಲಯ ಸಿಬ್ಬಂದಿಗಳನ್ನು ಹೊರತುಪಡಿಸಿ ಯಾರಿಗೂ ಒಳಗೆ ಪ್ರವೇಶ ಇಲ್ಲ. ಸುರಕ್ಷತೆ ದೃಷ್ಟಿಯಿಂದ ಸಿಬ್ಬಂದಿಗಳಿಗೆ ಸ್ವಚ್ಛತೆಯಾಗಿರಲು ಹೇಳಲಾಗಿದೆ. ಎಲ್ಲಾ ಸಿಬ್ಬಂದಿಗಳಿಗೂ ಮಾಸ್ಕ್ ಮತ್ತು ಸ್ಯಾನಿಟೈಸರ್ ಕೊಡಲಾಗಿದೆ. ನಮ್ಮ ಮೃಗಾಲಯದಲ್ಲಿ ಒಂದು ಪ್ರಾಣಿಗೂ ಮತ್ತೊಂದು ಪ್ರಾಣಿಗೂ ನಡುವೆ  ಅಂತರ ಇದೆ. ಪ್ರಾಣಿಗಳಿಗೆ ಯಾವುದೇ ತೊಂದರೆಯಾಗದ ರೀತಿ ನೋಡಿಕೊಳ್ಳಲಾಗುತ್ತಿದೆ ಎಂದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: