ಕರ್ನಾಟಕ

ಬಾಗಲಕೋಟೆ: ರಸ್ತೆಯಲ್ಲೇ ಗರ್ಭಿಣಿ ಮಹಿಳೆಗೆ ಹೆರಿಗೆ ಮಾಡಿಸಿದ ಸ್ಥಳೀಯ ಮಹಿಳೆಯರು

ಬಾಗಲಕೋಟೆ,ಏ.6-ಏಕಾಏಕಿ ಹೆರಿಗೆ ನೋವು ಕಾಣಿಸಿಕೊಂಡ ಗರ್ಭಿಣಿ ಮಹಿಳೆಗೆ ಸ್ಥಳೀಯ ಮಹಿಳೆಯರೇ ಹೆರಿಗೆ ಮಾಡಿಸಿರುವ ಘಟನೆ ನಡೆದಿದೆ.

ಜಿಲ್ಲೆಯ ಮುಧೋಳ- ನಿಪ್ಪಾಣಿ ರಾಜ್ಯ ಹೆದ್ದಾರಿಯ ಸೈದಾಪೂರ ಕ್ರಾಸ್ ಬಳಿ ಘಟನೆ ನಡೆದಿದೆ. ಹೊಲದಲ್ಲಿದ್ದ ಗರ್ಭಿಣಿ ಮಹಿಳೆಗೆ ಏಕಾಏಕಿ ಹೆರಿಗೆ ನೋವು ಕಾಣಿಸಿಕೊಂಡಿದೆ. ತಕ್ಷಣ ಸ್ಥಳೀಯರು ಗರ್ಭಿಣಿಯನ್ನು ಬೈಕ್ ನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಮುಂದಾದಾಗ ಹೆರಿಗೆ ನೋವು ಜಾಸ್ತಿಯಾಗಿದೆ. ತಕ್ಷಣ ಸ್ಥಳೀಯ ಮಹಿಳೆಯರೇ ಮಹಿಳೆಗೆ ಹೆರಿಗೆ ಮಾಡಿಸಿದ್ದು, ಮಹಿಳೆಯು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

ತಕ್ಷಣ ಆಂಬ್ಯುಲೆನ್ಸ್ ಗೆ ಕರೆ ಮಾಡಿ ತಾಯಿ ಮತ್ತು ಮಗುವನ್ನು ಮಹಾಲಿಂಗಪುರದ ಆಸ್ಪತ್ರೆಗೆ ದಾಖಲಿಸಿದ್ದಾರೆ. ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ ಎಂದು ತಿಳಿದು ಬಂದಿದೆ. (ಎಂ.ಎನ್)

 

Leave a Reply

comments

Related Articles

error: