ಪ್ರಮುಖ ಸುದ್ದಿ

ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ   ಚಂದನವನದ ಹಾಸ್ಯ ನಟ ಬುಲೆಟ್ ಪ್ರಕಾಶ್ ಇನ್ನಿಲ್ಲ

ರಾಜ್ಯ(ಬೆಂಗಳೂರು)ಏ.6:- ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ   ಚಂದನವನದ ಹಾಸ್ಯ ನಟ ಬುಲೆಟ್ ಪ್ರಕಾಶ್ ಇಂದು ಬೆಂಗಳೂರಿನ ಪೋರ್ಟೀಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಅವರಿಗೆ ಕೇವಲ 44ವರ್ಷ ವಯಸ್ಸಾಗಿತ್ತು. ಕೆಲವು ದಿನಗಳಿಂದ ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಪಡೆಯುತ್ತಿದ್ದ ಸಮಯದಲ್ಲಿ ಪರೀಕ್ಷೆಯ ವೇಳೆ ಕಿಡ್ನಿ ಮತ್ತು ಲಿವರ್ ವೈಫಲ್ಯಗೊಂಡಿರುವುದು ಗಮನಕ್ಕೆ  ಬಂದಿತ್ತು. ಚಿಕಿತ್ಸೆ ಫಲಿಸದೇ ಅವರು ಸಾವನ್ನಪ್ಪಿದ್ದಾರೆ.

ಅವರು ಪತ್ನಿ ಓರ್ವ ಪುತ್ರಿ, ಹಾಗೂ ಪುತ್ರನನ್ನು ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ. ಅವರು 325ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದರು. ಅವರ ನಿಧನಕ್ಕೆ ಕನ್ನಡ ಚಿತ್ರರಂಗ ಕಂಬನಿ ಮಿಡಿದಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: