ಪ್ರಮುಖ ಸುದ್ದಿ

ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ಸೇವೆ ಹಳೆಯ ಕಟ್ಟಡದಲ್ಲೇ ಸಿಗಲಿದೆ

ರಾಜ್ಯ( ಮಡಿಕೇರಿ) ಏ.7 :- ಆದರೆ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಅಧೀನದಲ್ಲಿದ್ದ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯು ಈ ಹಿಂದಿನಂತೆ ಈಗಿರುವ ಕಟ್ಟಡದಲ್ಲೇ ಕಾರ್ಯ ನಿರ್ವಹಿಸುತ್ತಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.
ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಅಧೀನದ ಮಡಿಕೇರಿಯ ಜಿಲ್ಲಾ ಆಸ್ಪತ್ರೆಯನ್ನು ಸಂಪೂರ್ಣವಾಗಿ ಪ್ರತ್ಯೇಕ ಕೋವಿಡ್ ಕೇರ್ ಆಸ್ಪತ್ರೆಯನ್ನಾಗಿ ಪರಿವರ್ತಿಸಲಾಗಿದೆ. ನಗರದ ಅಶ್ವಿನಿ ಆಸ್ಪತ್ರೆಯನ್ನು ಸಂಪೂರ್ಣವಾಗಿ ಜಿಲ್ಲಾಡಳಿತದ ವಶಕ್ಕೆ ತೆಗೆದುಕೊಳ್ಳಲಾಗಿದೆ. ಜಿಲ್ಲಾ ಆಸ್ಪತ್ರೆಯಲ್ಲಿ ನೀಡಲಾಗುತ್ತಿರುವ ಕೋವಿಡ್ ಯೇತರ ಸೇವೆಗಳನ್ನು ಈ ಆಸ್ಪತ್ರೆಯಲ್ಲಿ ನೀಡಲಾಗುತ್ತಿದೆ. ಅಲ್ಲದೆ ಹೊರ ರೋಗಿಗಳ ತಪಾಸಣೆ ನಡೆಸಿ ವೈದ್ಯಕೀಯ ಸಲಹೆ ಮತ್ತು ಔಷಧಿಗಳನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. (ಕೆಸಿಐ,ಎಸ್.ಎಚ್)

Leave a Reply

comments

Related Articles

error: