ಪ್ರಮುಖ ಸುದ್ದಿ

ಕೊಡಗಿನಲ್ಲಿ 1538 ಮಂದಿಗೆ ಗೃಹ ಸಂಪರ್ಕ ತಡೆ : 17 ಮಂದಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ

ರಾಜ್ಯ( ಮಡಿಕೇರಿ) ಏ.7 :- ಕೊರೋನಾ ಸೋಂಕು ಹರಡದಂತೆ ಕೊಡಗು ಜಿಲ್ಲಾಡಳಿತ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದು, ಇಲ್ಲಿಯವರೆಗೆ 1538 ಮಂದಿಗೆ ಗೃಹ ಸಂಪರ್ಕ ತಡೆ ಮಾಡಲಾಗಿದೆ. ಒಟ್ಟು 17 ಮಂದಿಗೆ ಜಿಲ್ಲಾಸ್ಪತ್ರೆಯ ಪ್ರತ್ಯೇಕ ಕೊಠಡಿಗಳಲ್ಲಿ ಉಪಚರಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.
ವಿದೇಶ ಪ್ರವಾಸ ಮಾಡಿದವರ ಪೈಕಿ ಗೃಹ ಸಂಪರ್ಕ ತಡೆಯಲ್ಲಿದ್ಜ ಎಲ್ಲರೂ 14 ದಿನಗಳ ಸಂಪರ್ಕ ತಡೆ ಅವಧಿಯನ್ನು ಪೂರೈಸಿದ್ದಾರೆ. ಸ್ವಯಂಪ್ರೇರಿತರಾಗಿ ವರದಿ ಮಾಡಿಕೊಂಡ ಪ್ರಕರಣಗಳು ಮತ್ತು 14 ದಿನಗಳೊಳಗಿರುವ ಪ್ರಕರಣಗಳ ಗೃಹ ಸಂಪರ್ಕ ತಡೆಯಲ್ಲಿರುವ ಪ್ರಕರಣಗಳ ವಿವರ ಹೀಗಿದೆ.
ಸೋಂಕು ದೃಢಪಟ್ಚ ಪ್ರಕರಣದ ಪ್ರಾಥಮಿಕ ಸಂಪರ್ಕಗಳು 4, ಜಿಲ್ಲೆಯಲ್ಲಿ ಗೃಹ ಸಂಪರ್ಕ ತಡೆಯಲ್ಲಿರುವ ರಾಜ್ಯದ ಇತರೆ ಜಿಲ್ಲೆಗಳ ಜನರು-1496, ಜಿಲ್ಲೆಯಲ್ಲಿ ಗೃಹ ಸಂಪರ್ಕ ತಡೆಯಲ್ಲಿರುವ ಇತರೆ ರಾಜ್ಯಗಳ ಜನರು-38, ಹೀಗೆ ಜಿಲ್ಲೆಯಲ್ಲಿ ಗೃಹ ಸಂಪರ್ಕ ತಡೆಯಲ್ಲಿರುವ ಒಟ್ಟು ಜನರು-1538
ಇಲ್ಲಿಯವರೆಗೆ ಒಟ್ಟು 78 ಮಂದಿಯ ಗಂಟಲು ದ್ರವ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯ ಪರೀಕ್ಷೆಗೆ ಕಳುಹಿಸಲಾಗಿದೆ. ಅದರಲ್ಲಿ 1 ಪ್ರಕರಣ ದೃಢ ಪಟ್ಟಿದ್ದು, 71 ಪ್ರಕರಣಗಳಲ್ಲಿ ನೆಗೆಟಿವ್ ವರದಿ ಬಂದಿದೆ. ಉಳಿದ 6 ಪ್ರಕರಣಗಳಲ್ಲಿ ವರದಿಯನ್ನು ನಿರೀಕ್ಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.
ಆಸ್ಪತ್ರೆಯಲ್ಲಿ ದಾಖಲಾಗಿರುವವರು

ಪ್ರಸ್ತುತ ಸೋಂಕು ದೃಢಪಟ್ಟ 1 ಪ್ರಕರಣ ಮತ್ತು 16 ಸೋಂಕು ಶಂಕಿತ ಪ್ರಕರಣಗಳು ಸೇರಿದಂತೆ ಒಟ್ಟು 17 ಪ್ರಕರಣಗಳನ್ನು ಜಿಲ್ಲಾಸ್ಪತ್ರೆಯಲ್ಲಿ ಪ್ರತ್ಯೇಕ ಕೊಠಡಿಯಲ್ಲಿಟ್ಟು ಉಪಚರಿಸಲಾಗುತ್ತಿದೆ. (ಕೆಸಿಐ,ಎಸ್.ಎಚ್)

Leave a Reply

comments

Related Articles

error: