ಪ್ರಮುಖ ಸುದ್ದಿ

ಕೊಡಗು ಈಗ ಕೊರೋನಾ ಪ್ರಕರಣಗಳಿಲ್ಲದ ಜಿಲ್ಲೆ

ರಾಜ್ಯ( ಮಡಿಕೇರಿ) ಏ.8 :- ಮಡಿಕೇರಿಯ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೊಂಡಂಗೇರಿಯ ನಿವಾಸಿಯೊಬ್ಬರು ನಿರಂತರ ವೈದ್ಯಕೀಯ ಚಿಕಿತ್ಸೆ ಬಳಿಕ ಸಂಪೂರ್ಣ ಗುಣಮುಖರಾದ ಕಾರಣ ಸರ್ಕಾರದ ನಿರ್ದೇಶನದಂತೆ ಇಂದು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.
ಈ ವ್ಯಕ್ತಿಯನ್ನು ಮತ್ತೆ 14 ದಿನಗಳ ಗೃಹ ಸಂಪರ್ಕ ತಡೆಯಲ್ಲಿ ಇಡಲಾಗುವುದು ಮತ್ತು ವ್ಯಕ್ತಿಯ ಆರೋಗ್ಯ ಸ್ಥಿತಿಯನ್ನು ನಿಯಮಿತವಾಗಿ ಆರೋಗ್ಯ ಇಲಾಖೆ ಮೂಲಕ ಗಮನಿಸಲಾಗುವುದು. ಜಿಲ್ಲೆಯಲ್ಲಿ ದೃಢಪಟ್ಟ ವ್ಯಕ್ತಿ ಸಂಪೂರ್ಣವಾಗಿ ಗುಣಮುಖವಾಗಿರುವುದರಿಂದ, ಜಿಲ್ಲೆಯಲ್ಲಿ ಪ್ರಸ್ತುತ ಕೊರೋನ ಪಾಸಿಟಿವ್ ಪ್ರಕರಣಗಳಿರುವುದಿಲ್ಲ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ. (ಕೆಸಿಐ,ಎಸ್.ಎಚ್)

Leave a Reply

comments

Related Articles

error: