ಮೈಸೂರು

ಟೆರೆಷಿಯನ್ ಕಾಲೇಜಿನಲ್ಲಿ ಕನ್ನಡ ಸಂಭ್ರಮ

ಮೈಸೂರಿನ ಸಿದ್ದಾರ್ಥ ನಗರದಲ್ಲಿರುವ ಟೆರಿಷಿಯನ್ ಕಾಲೇಜಿನಲ್ಲಿ ಕನ್ನಡ ಸಂಭ್ರಮ 2017 ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

 ಕಾಲೇಜಿನ ಆವೆ ಮರಿಯ ಸಭಾಂಗಣದಲ್ಲಿ ಆಯೋಜಿಸಿದ ಕಾರ್ಯಕ್ರಮವನ್ನು ವೇದಿಕೆಯಲ್ಲಿ ಗಣ್ಯರು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ  ಪಾಲ್ಗೊಂಡ ಅಂತರರಾಷ್ಟ್ರೀಯ ಮಹಿಳಾ ಹೋರಾಟಗಾರ್ತಿ ಕೆ.ಎಸ್. ನಂದಿನಿ ಜಯರಾಂ ಮಾತನಾಡಿ ಇತ್ತೀಚಿನ ದಿನಗಳಲ್ಲಿ ಮಹಿಳೆ ತನ್ನ ಅಂತರಾಳದಿಂದ ಹೊರ ಬಂದು ವಿವಿಧ ಸಾಧನೆಯ ಹಾದಿಯಲ್ಲಿ ಸಾಗುತ್ತಿದ್ದಾಳೆ. ಭಾರತ ಯುವಶಕ್ತಿಯನ್ನು ಹೊಂದಿದ್ದು, ದೇಶವನ್ನು ಅಭಿವೃದ್ಧಿ ಪಥದತ್ತ ಒಯ್ಯಲು ಅವರ ಪಾತ್ರ ಹಿರಿದು ಎಂದರು.

ಕಾರ್ಯಕ್ರಮದಲ್ಲಿ ಬಿಗ್ ಬಾಸ್ ರನ್ನರ್ ಕಿರಿಕ್ ಕೀರ್ತಿ ಅವರಿಗೆ ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು.   ಸ್ವಚ್ಛ ಭಾರತ ಅಭಿಯಾನದ ರೂವಾರಿ ಹೆಚ್.ವಿ. ರಾಜೀವ್, ಕಾಲೇಜಿನ ಮ್ಯಾನೇಜರ್ ಸಿಸ್ಟರ್ ಅಂಜಲಿ, ಸಚಿತ, ಜನಿವಿವ್,  ಪ್ರೊ.ಜೋಸ್, ಸುಶೀಲಮ್ಮ,  ವೆಂಕಟೇಶ್, ನಮೀತ ಮತ್ತಿತರರು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. (ಬಿ.ಎಂ-ಎಸ್.ಎಚ್)

Leave a Reply

comments

Related Articles

error: