ಕರ್ನಾಟಕಪ್ರಮುಖ ಸುದ್ದಿ

ಕೊರೊನಾ ನಿಯಂತ್ರಣಕ್ಕಾಗಿ ಈ ಬಾರಿ ಕರಗ ಆಚರಣೆ ಇಲ್ಲ: ಸಿಎಂ ಬಿಎಸ್‍ವೈ

ಬೆಂಗಳೂರು (ಏ.8): ರಾಜ್ಯದಲ್ಲಿ ಕೊರೊನಾ ವೈರಸ್ ಭೀತಿ ಹೆಚ್ಚಳದ ಹಿನ್ನೆಲೆಯಲ್ಲಿ ಬೆಂಗಳೂರಿನ ಐತಿಹಾಸಿಕ ಕರಗ ಉತ್ಸವ ಆಚರಣೆ ಈ ಬಾರಿ ಇಲ್ಲ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಬಿ.ಎಸ್. ಯಡಿಯೂರಪ್ಪ, ಇಂದು ಬೆಂಗಳೂರಿನ ಐತಿಹಾಸಿಕ ಕರಗದ ದಿನ. ಶಕ್ತಿಯ ಆರಾಧನೆಯ ಉತ್ಸವ ಬೆಂಗಳೂರು ಕರಗ. ಕರೋನಾ ವೈರಸ್ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಈ ಬಾರಿ ಕರಗ ಆಚರಣೆ ಇಲ್ಲ. ಶಕ್ತಿ ಸ್ವರೂಪಿಣಿ ದ್ರೌಪದಿಯು ಕರೋನಾ ಸಂಕಷ್ಟದಿಂದ ನಮ್ಮನ್ನು ಪಾರು ಮಾಡಲಿ ಎಂದು ಶ್ರದ್ಧಾಪೂರ್ವಕವಾಗಿ ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ

(ಎನ್.ಬಿ)

Leave a Reply

comments

Related Articles

error: