ಪ್ರಮುಖ ಸುದ್ದಿ

ಅಶ್ವಿನಿ ಆಸ್ಪತ್ರೆಯಲ್ಲಿ ವೈದ್ಯಕೀಯ ವ್ಯವಸ್ಥೆ : ಜಿಲ್ಲಾಧಿಕಾರಿ ಪರಿಶೀಲನೆ

ರಾಜ್ಯ( ಮಡಿಕೇರಿ) ಏ.9 :- ಸ್ತ್ರೀ ರೋಗ ಸಂಬಂಧಿತ ಸೇವೆಗಳು, ಶಿಶು ವೈದ್ಯಕೀಯ ಸೇವೆಗಳು, ಸಿ.ಟಿ.ಸ್ಕ್ಯಾನ್, ಡಯಾಲಿಸಿಸ್, ಮಹಿಳೆಯರು ಮತ್ತು ಮಕ್ಕಳ ಔಷಧಿಗಳು, ಮಹಿಳೆಯರ ಮತ್ತು ಮಕ್ಕಳಿಗೆ ಸಂಬಂಧಿಸಿದ ಲ್ಯಾಬ್ ಪರೀಕ್ಷೆ ಸೇವೆಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಸೇವೆಗಳನ್ನು ಅಶ್ವಿನಿ ಆಸ್ಪತ್ರೆಯಲ್ಲಿ ಒದಗಿಸಲಾಗುತ್ತಿದೆ. ಈ ಬದಲಾವಣೆಯನ್ನು ಗಮನಿಸಿ ವೈದ್ಯಕೀಯ ಸೇವೆಗಳನ್ನು ಪಡೆಯುವಂತೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ನಗರದ ಕೋವಿಡ್ ಆಸ್ಪತ್ರೆಗೆ ಮತ್ತು ಅಶ್ವಿನಿ ಆಸ್ಪತ್ರೆಗೆ ಬುಧವಾರ ಭೇಟಿ ನೀಡಿದ ಜಿಲ್ಲಾಧಿಕಾರಿಗಳು ಅಲ್ಲಿನ ವ್ಯವಸ್ಥೆಗಳ ಬಗ್ಗೆ ಪರಿಶೀಲಿಸಿದರು.
ಮಹಿಳೆಯರ ಮತ್ತು ಮಕ್ಕಳ ಆಸ್ಪತ್ರೆಯ ಕಟ್ಟಡ ಈ ಹಿಂದೆ ಕಾರ್ಯ ನಿರ್ವಹಿಸುತ್ತಿದ್ದ ಕಟ್ಟಡದಲ್ಲೇ ಕಾರ್ಯ ಕಾರ್ಯನಿರ್ವಹಿಸುತ್ತಿದೆ. ಅಶ್ವಿನಿ ಆಸ್ಪತ್ರೆಯನ್ನು ಸಂಪೂರ್ಣವಾಗಿ ಜಿಲ್ಲಾಡಳಿತದ ವಶಕ್ಕೆ ಪಡೆಯಲಾಗಿದ್ದು, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಅಧೀನದ ಮಡಿಕೇರಿಯ ಜಿಲ್ಲಾ ಆಸ್ಪತ್ರೆಯನ್ನು ಸಂಪೂರ್ಣವಾಗಿ ಪ್ರತ್ಯೇಕ ಕೋವಿಡ್ ಆಸ್ಪತ್ರೆಯನ್ನಾಗಿ ಪರಿವರ್ತಿಸಲಾಗಿದೆ. ಸರ್ಕಾರದ ನಿರ್ದೇಶನದ ಪ್ರಕಾರ ಮಡಿಕೇರಿಯ ಕೋವಿಡ್ ಆಸ್ಪತ್ರೆಯಲ್ಲಿ ಒಟ್ಟು 250 ಹಾಸಿಗೆಗಳನ್ನು ವ್ಯವಸ್ಥೆ ಮಾಡಲಾಗಿದೆ ಎಂದು ಅವರು ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್, ಕೊಡಗು ವೈದ್ಯಕೀಯ ಕಾಲೇಜಿನ ಡೀನ್ ಡಾ.ಕಾರ್ಯಪ್ಪ, ಅಧೀಕ್ಷಕರಾದ ಡಾ.ಲೋಕೇಶ್, ಡಾ. ಮಂಜುನಾಥ್ ಮತ್ತಿತರ ಅಧಿಕಾರಿಗಳು ಈ ಸಂದರ್ಭ ಹಾಜರಿದ್ದರು. (ಕೆಸಿಐ,ಎಸ್.ಎಚ್)

Leave a Reply

comments

Related Articles

error: