ಮೈಸೂರು

ಜಿಲ್ಲೆಯಲ್ಲಿ ಹೋಂ ಕ್ವಾರೆಂಟೈನ್ ಸಂಖ್ಯೆಯಲ್ಲಿ ಹೆಚ್ಚಳ : 248ಜನರ ಮೇಲೆ ನಿಗಾ ; ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಮಾಹಿತಿ

ಮೈಸೂರು,ಏ.9:- ಕೊರೋನಾ ವೈರಸ್ ಸೋಂಕು ಸಂಬಂಧ ಜಿಲ್ಲೆಯಲ್ಲಿ ಹೋಂ ಕ್ವಾರೆಂಟೈನ್ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ನಿನ್ನೆ ಒಂದೇ ದಿನ 248ಜನರ ಮೇಲೆ ನಿಗಾವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಮಾಹಿತಿ ನೀಡಿದ್ದಾರೆ.

ಕೊರೋನಾ ಸೋಂಕಿತರ ಸಂಪರ್ಕದಲ್ಲಿದ್ದವರು ವಿದೇಶ, ಹೊರ ರಾಜ್ಯ ಹಾಗೂ ಹೊರ ಜಿಲ್ಲೆಗಳಿಂದ ಆಗಮಿಸಿದ್ದವರ ಮೇಲೆ ನಿಗಾ ವಹಿಸಲಾಗಿದೆ. ಮಂಗಳವಾರ 3057 ಇದ್ದ ಹೋಂ ಕ್ವಾರೆಂಟೈನ್ ಸಂಖ್ಯೆ ಬುಧವಾರ 3305ಕ್ಕೆ ಏರಿಕೆಯಾಗಿದೆ. ಇಲ್ಲಿಯವರೆಗೆ ಕೊರೋನಾ ಸೋಂಕಿತ 35 ವ್ಯಕ್ತಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಓರ್ವರು ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಉಳಿದಂತೆ 1715ಜನರನ್ನು 14ದಿನ ಮನೆಯಲ್ಲಿ ಕಳೆಯುವಂತೆ ನಿರ್ದೇಶನ ನೀಡಲಾಗಿದೆ. ಒಟ್ಟು 1556 ಜನ ಹೋಂ ಕ್ವಾರೆಂಟೈನ್ ಯಶಸ್ವಿಯಾಗಿ ಪೂರೈಸಿದ್ದಾರೆ. ಒಟ್ಟು 287 ರಕ್ತದ ಮಾದರಿಯನ್ನು ಪರೀಕ್ಷೆ ಮಾಡಲಾಗಿದೆ.

ಈ ಪೈಕಿ 35ಕೊರೋನಾ ಸೋಂಕು ಇರುವುದು ದೃಢಪಟ್ಟಿದ್ದು ಒಂದು ರಕ್ತದ ಮಾದರಿ ತಿರಸ್ಕೃತಗೊಂಡಿದೆ. ಹೊಸದಾಗಿ 20ಜನರನ್ನು ಪರೀಕ್ಷೆ ಮಾಡಿದ್ದು ಫಲಿತಾಂಶಕ್ಕಾಗಿ ಕಾಯಲಾಗುತ್ತಿದೆ. ಮೂರು ಫಲಿತಾಂಶ ಪೆಂಡಿಂಗ್ ಉಳಿದಿದೆ ಎಂದು ತಿಳಿಸಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: