ಮೈಸೂರು

ಉತ್ತರ ಪತ್ರಿಕೆಗಳ ಮೌಲ್ಯಮಾಪನವನ್ನು ರಾಜ್ಯದ ನಾಲ್ಕು ಕಡೆಗಳಲ್ಲಿ ನಡೆಸುವಂತೆ ಮರಿತಿಬ್ಬೇಗೌಡ ಸಲಹೆ

ಮೈಸೂರು,ಏ.9:- ಕೊರೋನಾ ಹಿನ್ನೆಲೆಯಲ್ಲಿ ಪದವಿಪೂರ್ವ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನವನ್ನು ರಾಜ್ಯದ ನಾಲ್ಕು ಕಡೆಗಳಲ್ಲಿ ನಡೆಸುವುದು ಸೂಕ್ತ ಎಂದು ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ಈ ಕುರಿತು ಮಾಧ್ಯಮ ಹೇಳಿಕೆ ನೀಡಿರುವ ಅವರು ಎಲ್ಲ ಶಿಕ್ಷಕರು ಬೆಂಗಳೂರಿಗೆ ತೆರಳಿ ಒಂದೆಡೆ ಕುಳಿತು ಮೌಲ್ಯಮಾಪನ ಮಾಡುವುದು ಸರಿಯಲ್ಲ. ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಸಾಧ್ಯವಾಗುವುದಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯದ ನಾಲ್ಕು ಕಡೆ ಮೌಲ್ಯ ಮಾಪನಕ್ಕೆ ಸರ್ಕಾರಕ್ಕೆ ಅವಕಾಶ ಮಾಡಿಕೊಡಬೇಕೆಂದು ಒತ್ತಾಯಿಸಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: