ದೇಶಪ್ರಮುಖ ಸುದ್ದಿ

ಕೊರೊನಾ ವೈರಸ್ ಹರಡುತ್ತಿದ್ದಾರೆಂದು ಆರೋಪಿಸಿ ಇಬ್ಬರು ಮಹಿಳಾ ವೈದ್ಯರ ಮೇಲೆ ಹಲ್ಲೆ

ನವದೆಹಲಿ,ಏ.9-ಇಬ್ಬರು ಮಹಿಳಾ ವೈದ್ಯರ ಮೇಲೆ ಹಲ್ಲೆ ನಡೆಸಿರುವ ಘಟನೆ ದೆಹಲಿಯ ಗೌತಮ್ ನಗರದಲ್ಲಿ ನಡೆದಿದೆ.

ವೈದ್ಯರು ಬಡಾವಣೆಯಲ್ಲಿ ಕೊರೊನಾ ಸೋಂಕು ಹರಡುತ್ತಿದ್ದಾರೆ ಎಂದು ಆರೋಪಿಸಿ ವ್ಯಕ್ತಿಯೊಬ್ಬ ವೈದ್ಯರ ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆ ನಡೆಸಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದು, ಎಫ್ಐಆರ್ ದಾಖಲಿಸಿದ್ದಾರೆ.

ಈ ಇಬ್ಬರು ವೈದ್ಯರು ಸಫರ್ ಜಂಗ್ ಆಸ್ಪತ್ರೆಯ ತುರ್ತು ವಿಭಾಗದಲ್ಲಿ ಕೆಲಸ ಮಾಡುತ್ತಿದ್ದಾರೆ. ಬುಧವಾರ ರಾತ್ರಿ 9.30 ಸುಮಾರಿಗೆ ಇಬ್ಬರು ವೈದ್ಯರು ಹಣ್ಣುಗಳನ್ನು ಖರೀದಿ ಮಾಡಲು ಹೊರಗೆ ಹೋಗಿದ್ದರು. ಆಗ ವ್ಯಕ್ತಿ ವೈದ್ಯರು ನಮ್ಮ ಬಡಾವಣೆಯಲ್ಲಿ ಕೊರೊನಾ ಹರಡುತ್ತಿದ್ದಾರೆ ಎಂದು ಕೂಗಾಡಿದ್ದ. ವೈದ್ಯರು ವ್ಯಕ್ತಿಗೆ ಅರಿವು ಮೂಡಿಸುವ ಪ್ರಯತ್ನ ಮಾಡಿದರು. ಆಗ ಅಕ್ಕಪಕ್ಕದವರು ಸೇರಿದ್ದು, ವೈದ್ಯರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.

ಕೋವಿಡ್ – 19 ರೋಗಿಗಳಿಗೆ ಚಿಕಿತ್ಸೆ ನೀಡುವ ವೈದ್ಯರಿಗೆ ಫೈವ್ ಸ್ಟಾರ್ ಹೋಟೆಲ್ಗಳಲ್ಲಿ ವಸತಿ ವ್ಯವಸ್ಥೆಯನ್ನು ದೆಹಲಿ ಸರ್ಕಾರ ಮಾಡಿದೆ. ಅವರು ಮನೆಗೆ ಹೋಗಿ ಕುಟುಂಬ ಸದಸ್ಯರಿಗೆ ಸೋಂಕು ಹರಡಬಾರದು ಎಂದು ಅಗತ್ಯ ಎಚ್ಚರಿಕೆ ಕೈಗೊಳ್ಳಲಾಗಿದೆ. (ಎಂ.ಎನ್)

Leave a Reply

comments

Related Articles

error: