ಕರ್ನಾಟಕಪ್ರಮುಖ ಸುದ್ದಿ

ಕ್ರಿಮಿನಲ್ ಪ್ರಕರಣವಿರುವ ವಿದೇಶಿ ವಿದ್ಯಾರ್ಥಿಗಳು ಸ್ವದೇಶಕ್ಕೆ ಗಡಿಪಾರು : ಜಿ.ಪರಮೇಶ್ವರ್‍

ಬೆಂಗಳೂರು: ಅಪರಾಧ ಪ್ರಕರಣಗಳ ಆರೋಪ ಹೊತ್ತಿರುವ ಕರ್ನಾಟಕದಲ್ಲಿರುವ ನೈಜಿರಿಯನ್ ಪ್ರಜೆಗಳನ್ನು ಸ್ವದೇಶಕ್ಕೆ ಗಡಿಪಾರು ಮಾಡಲು ನಿರ್ಧರಿಸಿರುವುದಾಗಿ ಎಂದು ಗೃಹ ಸಚಿವ ಪರಮೇಶ್ವರ ಅವರು ಹೇಳಿದ್ದಾರೆ.

ವಿಧಾನ ಪರಿಷತ್‍ನಲ್ಲಿ ಇಂದು ಬಿಜೆಪಿ ಸದಸ್ಯ ವಿ. ಸೋಮಣ್ಣ ಅವರ ಪ್ರಶ್ನೆಗೆ ಉತ್ತರಿಸುತ್ತಿದ್ದ ಸಚಿವರು, ಡ್ರಗ್ಸ್ ಪ್ರಕರಣಗಳಲ್ಲಿ ಭಾಗಿಯಾಗಿರುವ ಹಲವು ವಿದೇಶಿ ಪ್ರಜೆಗಳು ತಮ್ಮ ವೀಸಾ ಅವಧಿ ಮುಗಿದರೂ ಅಕ್ರಮವಾಗಿ ಇಲ್ಲಿ ವಾಸಿಸುತ್ತಿದ್ದಾರೆ. ಅವರ ವಿರುದ್ಧ ಹಲವು ಕ್ರಿಮಿನಲ್ ಪ್ರಕರಣಗಳಿವೆ. ಹೀಗಾಗಿ ಗೋವಾ ಸರ್ಕಾರದ ಮಾದರಿಯಲ್ಲಿ ವಿದೇಶಿಯರ ವಿರುದ್ಧದ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆದು ಅವರನ್ನು ಅವರ ದೇಶಕ್ಕೆ ಕಳುಹಿಸುವ ವ್ಯವಸ್ಥೆ ಮಾಡಲಾಗುವುದು ಎಂದರು.

ಗೋವಾ ಸರ್ಕಾರ ಕೂಡ ಇಂತಹುದೇ ಕ್ರಮವನ್ನು ಹಿಂದಿನಿಂದಲೂ ಕೈಗೊಂಡಿದ್ದು, ಇದಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಯನ್ನು ಗೋವಾ ಸರ್ಕಾರದಿಂದ ಪಡೆದಿದ್ದೇವೆ ಎಂದರು.

ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿರುವ ವಿದೇಶಿ ವಿದ್ಯಾರ್ಥಿಗಳ ಬಗ್ಗೆ ಸಂಪೂರ್ಣ ಮಾಹಿತಿ ಕಲೆಹಾಕುತ್ತಿಲ್ಲ. ಕಾಲೇಜುಗಳು ವಿದೇಶಿ ವಿದ್ಯಾರ್ಥಿಗಳ ಸಂಪೂರ್ಣ ಮಾಹಿತಿ ಪಡೆಯದೇ ಪ್ರವೇಶ ನೀಡುವುದು ಸಾಮಾನ್ಯವಾಗಿದೆ. ವಿದ್ಯಾರ್ಥಿಗಳ ಪ್ರವೇಶ ಸಮಯದಲ್ಲೇ ಸಂಪೂರ್ಣ ಮಾಹಿತಿ ಪಡೆದು ಪೊಲೀಸರಿಗೆ ಸಹಕರಿಸಬೇಕು ಕಾಲೇಜುಗಳ ಆಡಳಿತ ಮಂಡಳಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

2015 ರಿಂದ ಇದುವರೆಗೆ 23 ನೈಜಿರಿಯನ್ ಪ್ರಜೆಗಳ ವಿರುದ್ಧ ಗಾಂಜಾ ಕೇಸ್ ದಾಖಲಿಸಲಾಗಿದೆ. 31 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವರು ಸದನಕ್ಕೆ ಮಾಹಿತಿ ನೀಡಿದರು.

(ಎನ್‍.ಬಿ.ಎನ್)

Leave a Reply

comments

Related Articles

error: