ಕರ್ನಾಟಕಪ್ರಮುಖ ಸುದ್ದಿ

ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 191ಕ್ಕೆ ಏರಿಕೆ: ಬಾಗಲಕೋಟೆಯಲ್ಲಿ ಮೂವರು ಮಕ್ಕಳಿಗೆ ಸೋಂಕು

ಬೆಂಗಳೂರು,ಏ.9-ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 191ಕ್ಕೆ ಏರಿದೆ. ಇಂದು 10 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.

ಬಾಗಲಕೋಟೆಯ ಮೂವರಲ್ಲಿ, ಬೆಂಗಳೂರು, ಮೈಸೂರಿನಲ್ಲಿ ತಲಾ ಇಬ್ಬರು, ಚಿಕ್ಕಬಳ್ಳಾಪುರ, ಮಂಡ್ಯ ಹಾಗೂ ಬೆಳಗಾವಿಯಲ್ಲಿ ತಲಾ ಒಬ್ಬರಿಗೆ ಸೋಂಕು ದೃಢಪಟ್ಟಿದೆ.

ಬಾಗಲಕೋಟೆಯಲ್ಲಿ ಮೂವರು ಮಕ್ಕಳಿಗೆ ಸೋಂಕು ತಗುಲಿದೆ. ಬಾಗಲಕೋಟೆಯಲ್ಲಿ ಮೃತ ವೃದ್ಧನಿಂದ ಸೋಂಕು ತಗುಲಿಸಿಕೊಂಡಿದ್ದ ನೆರೆ ಮನೆಯ ವ್ಯಕ್ತಿಯ ನಾಲ್ಕು ವರ್ಷದ ಮಗ, ಆತನ ಮೈದುನನ 13 ವರ್ಷದ ಮಗ ಹಾಗೂ 9 ವರ್ಷದ ಮಗಳಿಗೂ ಸೋಂಕು ತಗುಲಿದೆ.

ಬೆಂಗಳೂರಿನಲ್ಲಿ ನಿಜಾಮುದ್ಧೀನ್ ಧಾರ್ಮಿಕ ಸಮಾವೇಶದಲ್ಲಿ ಭಾಗವಹಿಸಿದ್ದ (ದೆಹಲಿ ಪ್ರಯಾಣ ಹಿನ್ನಲೆ) ಇಬ್ಬರಲ್ಲಿ ಸೋಂಕು ದೃಢಪಟ್ಟಿದೆ. (ಎಂ.ಎನ್)

Leave a Reply

comments

Related Articles

error: