ಕರ್ನಾಟಕಪ್ರಮುಖ ಸುದ್ದಿ

ಲಾಕ್‌ಡೌನ್‌ ವಿಸ್ತರಣೆ ವಿಚಾರ ಮೋದಿಯೊಂದಿಗೆ ಚರ್ಚಿಸಿ ತೀರ್ಮಾನ: ಸಿಎಂ ಯಡಿಯೂರಪ್ಪ

ಬೆಂಗಳೂರು,ಏ.9- ರಾಜ್ಯದಲ್ಲಿ ಲಾಕ್‌ಡೌನ್‌ ವಿಸ್ತರಿಸುವ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನ ಪ್ರಕಟಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ  ಮಾತನಾಡಿದ ಅವರು, ಕೊರೊನಾ ವೈರಸ್ ಸೋಂಕು ದಿನೇ ದಿನೇ ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ರಾಜ್ಯದಲ್ಲಿ ಇನ್ನೂ 15 ದಿನಗಳ ಕಾಲ ಲಾಕ್‌ಡೌನ್‌ ವಿಸ್ತರಿಸುವಂತೆ ಸಚಿವ ಸಂಪುಟದ ಎಲ್ಲ ಸದಸ್ಯರು ಒತ್ತಾಯಿಸಿದ್ದಾರೆ. ಈ ಬಗ್ಗೆ ಮೋದಿ ಚರ್ಚಿಸಿ ತೀರ್ಮಾನಿಸುವುದಾಗಿ ಹೇಳಿದರು.

ಜನರು ಲಾಕ್‌ಡೌನ್‌ ಅನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕು. ಒಂದು ವೇಳೆ ಯಾರಾದರೂ ಉಲ್ಲಂಘಿಸಿದರೆ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ಬೆಂಗಳೂರಿನಲ್ಲಿ ಲಾಕ್‌ಡೌನ್‌ ಉಲ್ಲಂಘಿಸಿದವರ ಸುಮಾರು 10,000 ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಒಂದು ವೇಳೆ ಜನ ಕಿವಿಗೊಡದೇ ಇದ್ದಲ್ಲಿ, ಮತ್ತಷ್ಟು ಕಠಿಣ ಕ್ರಮ ತಗೆದುಕೊಳ್ಳಲಾಗುವುದು ಎಂದು ಯಡಿಯೂರಪ್ಪ ಎಚ್ಚರಿಕೆ ನೀಡಿದರು.

ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ, ಕೊರೊನಾ ವೈರಸ್ ವಿರುದ್ಧದ ಹೋರಾಟಕ್ಕೆ ಸಚಿವರು, ಶಾಸಕರು ಮತ್ತು ವಿಧಾನಪರಿಷತ್‌ ಸದಸ್ಯ ವೇತನದಲ್ಲಿ ಶೇ.30 ರಷ್ಟು ಕಡಿತ ಮಾಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.

ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ, ಡೆಪ್ಯೂಟಿ ಸ್ಪೀಕರ್‌ಗಳ ವೇತನ ಕಡಿತ ಮಾಡಲಾಗುವುದು. ಇದಕ್ಕೆ ಎಲ್ಲ ಪಕ್ಷಗಳ ನಾಯಕರೂ ಒಪ್ಪಿಗೆ ನೀಡಲಾಗಿದೆ. ವೇತನ ಕಡಿತದಿಂದ ಸುಮಾರು 16 ಕೋಟಿ ರೂ.ಗಳಷ್ಟು ಉಳಿತಾಯವಾಗುತ್ತದೆ. ಈ ಹಣವನ್ನು ಕೋವಿಡ್‌-19 ನಿಧಿಗೆ ನೀಡಲು ತೀರ್ಮಾನಿಸಲಾಗಿದೆ. ಇದಕ್ಕಾಗಿ ಸುಗ್ರೀವಾಜ್ಞೆ ಹೊರಡಿಸಲಾಗುವುದು ಎಂದು ಅವರು ಹೇಳಿದರು. (ಎಂ.ಎನ್)

 

Leave a Reply

comments

Related Articles

error: