ಪ್ರಮುಖ ಸುದ್ದಿಮೈಸೂರು

ಮೈಸೂರು ಜಿಲ್ಲೆ ಲಾಕ್‌ಡೌನ್ ಮುಂದುವರಿಕೆ ಬಗ್ಗೆ ಸಿಎಂ ತೀರ್ಮಾನ ಮಾಡ್ತಾರೆ : ಸಚಿವ ವಿ.ಸೋಮಣ್ಣ

ಜ್ಯುಬಿಲಿಯೆಂಟ್  ಕಾರ್ಖಾನೆಗೆ ಲೀಗಲ್ ನೋಟಿಸ್ ನೀಡಲಾಗಿದೆ

ಮೈಸೂರು,ಏ.9:- ಮೈಸೂರು ಜಿಲ್ಲೆ ಲಾಕ್‌ಡೌನ್ ಮುಂದುವರಿಕೆ ಬಗ್ಗೆ ಸಿಎಂ ತೀರ್ಮಾನ ಮಾಡ್ತಾರೆ ಎಂದು ಮೈಸೂರು ಜಿಲ್ಲೆ ಉಸ್ತುವಾರಿ ಸಚಿವ ವಿ.ಸೋಮಣ್ಣ ಹೇಳಿದರು.

ಮೈಸೂರಿನಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಜಿಲ್ಲೆಯ ಪರಿಸ್ಥಿತಿ ಬಗ್ಗೆ‌ ಸಿಎಂಗೆ ಮನವರಿಕೆ ಮಾಡಿದ್ದೇವೆ. ಯಡ್ಯೂರಪ್ಪನವರು ಪ್ರಧಾನಿಯೊಂದಿಗೆ ಮಾತುಕತೆ ನಡೆಸುತ್ತಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸೂಚನೆಯಂತೆ ನಿರ್ಧಾರವಾಗಲಿದೆ. ಇನ್ನೆರಡು ದಿನದಲ್ಲಿ ಸಿಎಂ ಅವರೇ ಈ ಬಗ್ಗೆ ತೀರ್ಮಾನ ಮಾಡ್ತಾರೆ ಎಂದರು.

ಜ್ಯುಬಿಲಿಯೆಂಟ್ ಕಾರ್ಖಾನೆ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ನಡೆದಿದೆ. ಮುಖ್ಯಮಂತ್ರಿಗಳು ಈ ಬಗ್ಗೆ ಕಾನೂನಾತ್ಮಕ ತನಿಖೆ ಆಗಲಿ ಅಂತ ಹೇಳಿದ್ದಾರೆ. ಕಾರ್ಖಾನೆ ಮಾಲೀಕರು ಎಷ್ಟೇ ಪ್ರಭಾವಿತರಾದರೂ ತನಿಖೆ ನಡೆಯಲಿದೆ.  ಜ್ಯುಬಿಲಿಯೆಂಟ್  ಕಾರ್ಖಾನೆಗೆ ಲೀಗಲ್ ನೋಟಿಸ್ ನೀಡಲಾಗಿದೆ. ನಾನು ಮತ್ತು ಆರೋಗ್ಯ ಸಚಿವರು ಸಿಎಂ ಇಡೀ ಪ್ರಕರಣದ ಮಾಹಿತಿ ನೀಡಿದ್ದೇವೆ. ಸದ್ಯ ಸಮಸ್ಯೆಯಿಂದ ಹೊರಬರಬೇಕು. ಸೋಂಕು ಹೇಗೆ ಬಂತು ಅನ್ನೋದು ಗೊತ್ತಾಗಬೇಕು. ಆ ನಿಟ್ಟಿನಲ್ಲಿ ಸರ್ಕಾರ  ಜ್ಯುಬಿಲಿಯೆಂಟ್ ಪ್ರಕರಣವನ್ನು  ಗಂಭೀರವಾಗಿ ಪರಿಗಣಿಸಿದೆ ಎಂದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: