ಪ್ರಮುಖ ಸುದ್ದಿ

ಕೊರೋನಾ ಮುನ್ನೆಚ್ಚರಿಕಾ ಕ್ರಮಗಳ ಕುರಿತು ನ್ಯಾಯಾಧೀಶರಿಂದ ಪರಿಶೀಲನೆ

ರಾಜ್ಯ( ಮಡಿಕೇರಿ) ಏ.10 :- ಉಚ್ಛ ನ್ಯಾಯಾಲಯದ ನಿರ್ದೇಶನದ ಮೇರೆಗೆ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ವಿ.ವಿ.ಮಲ್ಲಾಪುರ ಮತ್ತು ಹಿರಿಯ ಶ್ರೇಣಿ ನ್ಯಾಯಾಧೀಶೆ ಹಾಗೂ ಸದಸ್ಯ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನಿಸ ಅವರು   ಮಡಿಕೇರಿ ಜಿಲ್ಲಾ ಆಸ್ಪತ್ರೆ ಹಾಗೂ ಅಶ್ವಿನಿ ಆಸ್ಪತ್ರೆಗೆ ಭೇಟಿ ನೀಡಿ ಕೊರೋನಾ ವೈರಾಣುವಿಂದ ಹರಡಿರುವ ಸಾಂಕ್ರಾಮಿಕ ರೋಗದ ಬಗ್ಗೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದರು.
ಇದೇ ಸಂದರ್ಭ ಅವರುಗಳು ವೈದ್ಯರು, ದಾದಿಯರು, ಇತರ ವೈದ್ಯಕೀಯ ಸಿಬ್ಬಂದಿಯ ಸುರಕ್ಷತೆ ಬಗ್ಗೆ ಯಾವ ರೀತಿಯ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ಸಂಗ್ರಹಿಸಿದರು. ಕೊವಿಡ್19ರ ಚಿಕಿತ್ಸೆಗಾಗಿ ಬೇಕಾದ ಔಷಧಿ, ಮಾಸ್ಕ್, ಕೈಗವಚ, ಸಾನಿಟೈಸರ್, ವೆಂಟಿಲೆಟರ್‍ಗಳ ದಾಸ್ತಾನು ಮಾಡಲಾಗಿದೆಯೇ ಎಂಬುದನ್ನೂ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಮುಖ್ಯಸ್ಥ ಡಾ.ಕಾರ್ಯಪ್ಪ, ವೈದ್ಯಾಧಿಕಾರಿಗಳು ಇತರರು ಹಾಜರಿದ್ದರು. (ಕೆಸಿಐ,ಎಸ್.ಎಚ್)

Leave a Reply

comments

Related Articles

error: