ಮೈಸೂರು

ನಂಜನಗೂಡಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳ : ಲಾಕ್ ಡೌನ್ ಬಿಗಿ; ಪೊಲೀಸ್ ರಿಂದ ಪಥ ಸಂಚಲನ

ಮೈಸೂರು,ಏ.10:-ನಂಜನಗೂಡು ತಾಲೂಕಿನ ಹೆಬ್ಯಾ ಗ್ರಾಮದಲ್ಲಿ ಒಂದೇ ಕುಟುಂಬದ ಮೂವರಿಗೆ ಕೊರೋನಾ ಸೋಂಕು ದೃಢಪಟ್ಟಿರುವುದರಿಂದ ಗ್ರಾಮವನ್ನು ರೆಡ್ ಅಲರ್ಟ್ ಎಂದು ಘೋಷಣೆ ಮಾಡಲಾಗಿದೆ. ನಂಜನಗೂಡಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಬೆನ್ನಲ್ಲೇ ಲಾಕ್ ಡೌನ್ ನ್ನು ಪೊಲೀಸರು ಮತ್ತಷ್ಟು ಬಿಗಿಗೊಳಿಸಿದ್ದು ಡಿವೈ ಎಸ್ಪಿ ಪ್ರಭಾಕರರಾವ್ ಶಿಂಧೆ ನೇತೃತ್ವದಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ನಿನ್ನೆ ಪಥ ಸಂಚಲನ ನಡೆಯಿತು.

ನಗರದ ಪ್ರಮುಖ ರಸ್ತೆಗಳಲ್ಲಿ ಪಥ ಸಂಚಲನ ನಡೆಸಿದ ಪೊಲೀಸರು ಅನಗತ್ಯವಾಗಿ ಹೊರಗಡೆ ಓಡಾಡದಂತೆ ಸಾರ್ವಜನಿಕರಿಗೆ ಮನವರಿಕೆ ಮಾಡಿಕೊಟ್ಟರು. ಈಗಾಗಲೇ ನಂಜನಗೂಡು ಪ್ರವೇಶಿಸುವ ಎಲ್ಲ ಮಾರ್ಗಗಳಲ್ಲಿನ ಚೆಕ್ ಪೋಸ್ಟ್ ಗಳಲ್ಲಿ ಅನಗತ್ಯ ವಾಹನಗಳಿಗೆ ಪ್ರವೇಶ ನೀಡದೇ ಬಂದ್ ಮಾಡಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: