ಮೈಸೂರು

ಜಿಲ್ಲೆಯಲ್ಲಿ 3428 ಮಂದಿ ಹೋಂ ಕ್ವಾರೆಂಟೈನ್ ನಲ್ಲಿ

ಮೈಸೂರು,ಏ.10:-ಕೊರೋನಾ ವೈರಸ್ ಸಂಬಂಧ ಜಿಲ್ಲೆಯಲ್ಲಿ ಹೋಂ ಕ್ವಾರೆಂಟೈನ್ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದುಬುಧವಾರ 3305 ಇದ್ದ ಹೋಂ ಕ್ವಾರೆಂಟೈನ್ ಸಂಖ್ಯೆ ಗುರುವಾರಕ್ಕೆ 3428ಕ್ಕೆ ಏರಿಕೆಯಾಗಿದೆ. ಕೊರೋನಾ ಸೋಂಕಿತ 37ವ್ಯಕ್ತಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈವರೆಗೆ ಕೊರೋನಾ ಸೋಂಕಿತರ ಸಂಪರ್ಕದಲ್ಲಿದ್ದವರು, ವಿದೇಶ, ಹೊರರಾಜ್ಯ ಹಾಗೂ ಹೊರ ಜಿಲ್ಲೆಗಳಿಂದ ಆಗಮಿಸಿದ್ದವರ ಮೇಲೆ ನಿಗಾ ವಹಿಸಲಾಗಿದೆ.

1836ಜನರಿಗೆ 14ದಿನ ಮನೆಯಲ್ಲಿ ಕಳೆಯವಂತೆ ನಿರ್ದೇಶನ ನೀಡಲಾಗಿದೆ. ಒಟ್ಟು 1556 ಜನ ಹೋಂ ಕ್ವಾರೆಂಟೈನ್ ಪೂರೈಸಿದ್ದಾರೆ. ಒಟ್ಟು 401ರಕ್ತದ ಮಾದರಿಯನ್ನು ಪರೀಕ್ಷೆ ಮಾಡಲಾಗಿದೆ. ಈ ಪೈಕಿ 37 ಕೊರೋನಾ ಸೋಂಕಿರುವುದು ದೃಢಪಟ್ಟಿದ್ದು, ಒಂದು ರಕ್ತದ ಮಾದರಿ ತಿರಸ್ಕೃತಗೊಂಡಿದೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: