ದೇಶಪ್ರಮುಖ ಸುದ್ದಿ

ಕೇಂದ್ರ ಸರ್ಕಾರಿ ನೌಕರರಿಗೆ ಶೇ.2 ತುಟ್ಟಿ ಭತ್ಯೆ ಹೆಚ್ಚಳ

ನವದೆಹಲಿ: ಕೇಂದ್ರ ಸರ್ಕಾರವು ತನ್ನ ನೌಕರರಿಗೆ ಶೇ.2ರಷ್ಟು ತುಟ್ಟಿ ಭತ್ಯೆ ಹೆಚ್ಚಳ ಮಾಡಿದೆ.

ಈ ವರ್ಷದ ಜನವರಿ 1 ರಿಂದ ಪೂರ್ವಾನ್ವಯ ವಾಗುವಂತೆ ತುಟ್ಟಿ ಭತ್ಯೆ ಹೆಚ್ಚಳ ಮಾಡಿ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಯುಗಾದಿ ಹಬ್ಬದ ಗಿಫ್ಟ್ ನೀಡಿದೆ.

ಪ್ರಧಾನಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಶೇ.2ರಷ್ಟು ತುಟ್ಟಿಭತ್ಯೆ ಹೆಚ್ಚಳಕ್ಕೆ ಅನುಮೋದನೆ ನೀಡಿದೆ.

ಈ ಹೆಚ್ಚಳವು 2017 ರ ಜನವರಿ 1 ರಿಂದಲೇ ಪೂರ್ವಾನ್ವಯವಾಗಲಿದ್ದು, ಇದರಿಂದ 48.85 ಲಕ್ಷ ಸರ್ಕಾರಿ ನೌಕರರು ಮತ್ತು 55.51 ಲಕ್ಷ ಪಿಂಚಣಿದಾರರಿಗೆ ಅನುಕೂಲವಾಗಲಿದೆ. ಕೇಂದ್ರ ಸರ್ಕಾರಕ್ಕೆ 5,833 ಕೋಟಿ ರೂ. ಹೊರೆಯಾಗಲಿದ್ದು, ಪ್ರತಿವರ್ಷ 6,833.50 ಕೋಟಿ. ರೂ. ಹಣಕಾಸು ಹೊರೆ ಬೀಳಲಿದೆ.

ಕೇಂದ್ರ ಸರ್ಕಾರಿ ನೌಕರರಿಗೆ ಕಳೆದ ವರ್ಷವೂ 2016ರ ಜುಲೈ 1 ರಿಂದ ತುಟ್ಟಿ ಭತ್ಯೆಯನ್ನು ಶೇ.2ರಷ್ಟು ಹೆಚ್ಚಿಸಲಾಗಿತ್ತು ಎಂಬುದು ಇಲ್ಲಿ ಗಮನಾರ್ಹ.

(ಎನ್‍.ಬಿ.ಎನ್)

Leave a Reply

comments

Related Articles

error: