ಮೈಸೂರು

ಸುತ್ತೂರು ಶಾಖಾ ಮಠಕ್ಕೆ ಸಚಿವ ಎಸ್.ಟಿ.ಸೋಮಶೇಖರ್ ಭೇಟಿ : ವೀರಶೈವ ಮಠಾಧಿಪತಿಗಳಿಂದ 1.50ಲಕ್ಷರೂ.ದೇಣಿಗೆ

ಮೈಸೂರು,ಏ.11:-  ಮೈಸೂರು ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು  ಶಾಖಾ ಮಠಕ್ಕೆ ಇಂದು ಬೆಳಿಗ್ಗೆ  ಭೇಟಿ ನೀಡಿದ   ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಎಸ್.ಟಿ.ಸೋಮಶೇಖರ್ ಅವರು, ಜಗದ್ಗುರು ಶ್ರೀ ಶಿವರಾತ್ರಿದೇಶೀಕೇಂದ್ರ ಮಹಾಸ್ವಾಮಿಗಳ ಆಶೀರ್ವಾದ ಪಡೆದರು.

ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಶ್ರೀಗಳು  ಸಚಿವರ ಜೊತೆ ಮಾತನಾಡಿ, ಈ ಮಹಾಮಾರಿ ಕೊರೋನಾ ಸಾಂಕ್ರಾಮಿಕ ರೋಗವು ಆದಷ್ಟು ಶೀಘ್ರವಾಗಿ ತೊಲಗಬೇಕು ಎಂದರಲ್ಲದೇ, ಸರ್ಕಾರ ಕೈಗೊಂಡಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಶ್ಲಾಘಿಸಿದರು.

ಈ ಸಂದರ್ಭ ಕೃಷಿಸಚಿವರಾದ ಬಿ.ಸಿ.ಪಾಟೀಲ್, ಮಾಜಿ ಸಚಿವರು, ಬಿಜೆಪಿ ಹಿರಿಯ ಮುಖಂಡರಾದ ಎಚ್. ವಿಶ್ವನಾಥ್, ಸಂಸದರಾದ ಪ್ರತಾಪ್ ಸಿಂಹ ಜೊತೆಗಿದ್ದರು.

ಇದೇ ವೇಳೆ ಕೋವಿಡ್-19 ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಮೈಸೂರು ಚಾಮರಾಜನಗರ ಜಿಲ್ಲಾ ವೀರಶೈವ ಮಠಾಧಿಪತಿಗಳು   ನೀಡಿರುವ ದೇಣಿಗೆ ರೂ. 1.50 ಲಕ್ಷ ಚೆಕ್ ಅನ್ನು ಸುತ್ತೂರು ಶ್ರೀ ಶಿವರಾತ್ರಿದೇಶೀ ಕೇಂದ್ರ ಜಗದ್ಗುರುಗಳ ಸಮ್ಮುಖದಲ್ಲಿ  ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರಿಗೆ ಹಸ್ತಾಂತರಿಸಲಾಯಿತು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: