ಪ್ರಮುಖ ಸುದ್ದಿ

ಕೋಮು ಪ್ರಚೋದನಾಕಾರಿ ಅಪಪ್ರಚಾರದ ವಿರುದ್ಧ ಕಠಿಣ ಕ್ರಮ

ರಾಜ್ಯ(ಮಡಿಕೇರಿ) ಏ.13 :- ಕೊರೋನಾ ವೈರಸ್ ಹರಡುತ್ತಿರುವ ಈ ಸೂಕ್ಷ್ಮ ಪರಿಸ್ಥಿತಿಯಲ್ಲೂ ಕೆಲವರು ಕೋಮುದ್ವೇಷ ಹರಡುವ ಕಿಡಿಗೇಡಿ ಕೃತ್ಯದಲ್ಲಿ ತೊಡಗಿದ್ದು, ಪೊಲೀಸ್ ಇಲಾಖೆಯ ಮನವಿಯನ್ನು ದಿಕ್ಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ರಚಾರದಲ್ಲಿ ತೊಡಗಿದರೆ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪನ್ನೇಕರ್ ಮತ್ತೊಮ್ಮೆ ಎಚ್ಚರಿಕೆ ನೀಡಿದ್ದಾರೆ.

ಕೊರೋನಾ ಹರಡದಂತೆ ಪೊಲೀಸ್ ಇಲಾಖೆ ಶ್ರಮಿಸುತ್ತಿದೆ. ಇದರ ನಡುವೆ ಕೋಮು ಪ್ರಚೋದನಾಕಾರಿ ಹೇಳಿಕೆಗಳು ಹರಿದಾಡುತ್ತಿರುವುದು ಪೊಲೀಸರಿಗೆ ತಲೆ ನೋವಾಗಿ ಪರಿಣಮಿಸಿದೆ. (ಕೆಸಿಐ,ಎಸ್.ಎಚ್)

Leave a Reply

comments

Related Articles

error: