ಕರ್ನಾಟಕಪ್ರಮುಖ ಸುದ್ದಿ

ರಾಜ್ಯದಲ್ಲಿ ಮತ್ತೆ 11 ಮಂದಿಯಲ್ಲಿ ಕೊರೊನಾ ವೈರಸ್ ದೃಢ: ಸೋಂಕಿತರ ಸಂಖ್ಯೆ 258ಕ್ಕೆ ಏರಿಕೆ

ಬೆಂಗಳೂರು,ಏ.14-ರಾಜ್ಯದಲ್ಲಿ ಇಂದು ಮತ್ತೆ 11 ಮಂದಿಯಲ್ಲಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಈ ಪೈಕಿ 10 ವರ್ಷದ ಮಗುವಿಗೂ ಸೋಂಕು ತಗುಲಿದೆ.

ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 258ಕ್ಕೆ ಏರಿಕೆಯಾಗಿದೆ. ಈ ಪೈಕಿ 9 ಮಂದಿ ಸಾವನ್ನಪ್ಪಿದ್ದು, 65 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಬಾಗಲಕೋಟೆಯಲ್ಲಿ 3, ಕಲಬುರಗಿ 3, ಬೆಂಗಳೂರು ನಗರದಲ್ಲಿ 2, ಚಿಕ್ಕಬಳ್ಳಾಪುರ, ವಿಜಯಪುರ, ಬೆಳಗಾವಿಯಲ್ಲಿ ತಲಾ 1 ಪ್ರಕರಣ ವರದಿಯಾಗಿದೆ.

ಬಾಗಲಕೋಟೆಯಲ್ಲಿ 43 ವರ್ಷದ ಪುರುಷ, 32 ಮಹಿಳೆಗೆ ಸೋಂಕು ತಗುಲಿದ್ದು, ಇವರಿಬ್ಬರು ರೋಗಿ 186, 165 ಅವರೊಂದಿಗೆ ಸಂಪರ್ಕದಲ್ಲಿದ್ದರು. 39 ವರ್ಷದ ಮಹಿಳೆಯರಿಗೆ ಸೋಂಕು ತಗುಲಿದ್ದು, ಇವರು ರೋಗಿ 125ರ ನೆರೆಮನೆಯವರಾಗಿದ್ದಾರೆ.

ಕಲಬುರಗಿಯಲ್ಲಿ 10 ವರ್ಷದ ಹೆಣ್ಣು ಮಗು, 51 ವರ್ಷದ ಪುರುಷ, 35 ವರ್ಷದ ಮಹಿಳೆಗೆ ಸೋಂಕು ತಗುಲಿದೆ. ಈ ಪೈಕಿ ಮಗು ಹಾಗೂ ಮಹಿಳೆ ರೋಗಿ 177 ಅವರೊಂದಿಗೆ ಸಂಪರ್ಕದಲ್ಲಿದ್ದರು. ಮತ್ತೊಬ್ಬ ವ್ಯಕ್ತಿ ರೋಗಿ 205 ಅವರ ಸಹೋದರನಾಗಿದ್ದಾರೆ.

ಬೆಂಗಳೂರು ನಗರದಲ್ಲಿ 65 ಪುರುಷ, 26 ವರ್ಷದ ಯುವಕನಿಗೆ ಸೋಂಕು ತಗುಲಿದೆ. ಈ ಪೈಕಿ 65 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಯುವಕ ಏಪ್ರಿಲ್ 4 ರಂದು ದ್ವಿಚಕ್ರವಾಹನದಲ್ಲಿ ಹಿಂದೂಪುರದಿಂದ ಬಂದಿದ್ದರು.

ಚಿಕ್ಕಬಳ್ಳಾಪುರದಲ್ಲಿ 65 ವರ್ಷದ ಪುರುಷನಿಗೆ ಸೋಂಕು ತಗುಲಿದೆ. ವಿಜಯಪುರದಲ್ಲಿ 69 ವರ್ಷದ ವ್ಯಕ್ತಿಗೆ ಸೋಂಕು ತಗುಲಿದ್ದು, ಇವರು ರೋಗಿ 221 ಅವರ ಪತಿಯಾಗಿದ್ದಾರೆ. ಬೆಳಗಾವಿಯಲ್ಲಿ 33 ವರ್ಷದ ಪುರುಷನಿಗೆ ಸೋಂಕು ತಗುಲಿದ್ದು, ಈತ ದೆಹಲಿಯಿಂದ ಬಂದವರಾಗಿದ್ದಾರೆ. (ಎಂ.ಎನ್)

 

Leave a Reply

comments

Related Articles

error: