ಮೈಸೂರು

ಎನ್.ಮಂಜುನಾಥ್ ಅಂತಿಮ ದರ್ಶನ ಪಡೆದ ವಿವಿಧ ಪಕ್ಷಗಳ ರಾಜಕೀಯ ಮುಖಂಡರು

ಮಾಜಿ ವಿಧಾನ ಪರಿಷತ್ ಸದಸ್ಯ  ಎನ್.ಮಂಜುನಾಥ್ ಅವರ ಅಂತಿಮ ದರ್ಶನಕ್ಕೆ ವಿವಿಧ ಪಕ್ಷಗಳ ರಾಜಕೀಯ ಮುಖಂಡರು ಆಗಮಿಸಿ ಅಂತಿಮ ದರ್ಶನ ಪಡೆಯುತ್ತಿದ್ದಾರೆ.

ಮೈಸೂರಿಗೆ ಆಗಮಿಸಿದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೃದಯಾಘಾತದಿಂದ ಅಕಾಲಿಕ ಮರಣದ ಹೊಂದಿದ್ದ ಮಂಜುನಾಥ್ ಅವರ ಅಂತಿಮ ದರ್ಶನವನ್ನು ಪಡೆದರು. ಎನ್.ಆರ್.ಮೊಹಲ್ಲಾದ ಆದರ್ಶ ವಿದ್ಯಾರ್ಥಿ ನಿಲಯದಲ್ಲಿ ಮಂಜುನಾಥ್ ಅವರ ಅಂತಿಮ ದರ್ಶನಕ್ಕೆ ಸಕಲ‌ಸಿದ್ದತೆಯನ್ನು ಮಾಡಲಾಗಿದೆ. ಈ‌ ಹಿನ್ನಲೆಯಲ್ಲಿ ಮಾಜಿ ಸಂಸದ ಹೆಚ್.ವಿಶ್ವನಾಥ್, ಸಂಸದ ಧ್ರುವ ನಾರಾಯಣ್, ಮೈಸೂರು ನಗರ ಬಿಜೆಪಿ ಅಧ್ಯಕ್ಷ ಮಂಜುನಾಥ್, ಜೆಡಿಎಸ್ ಶಾಸಕ ಚಿಕ್ಕಮಾದು  ಸೇರಿದಂತೆ ಗಣ್ಯರು ಅಂತಿಮ ದರ್ಶನ ಪಡೆದುಕೊಂಡರು. ಇದೇವೇಳೆ ಮೃತ ಮಂಜುನಾಥ್ ಅವರ ಕುಟುಂಬಕ್ಕೆ ಸಾಂತ್ವನವನ್ನು ಹೇಳಿದರು. (ಎಸ್.ಎನ್-ಎಸ್.ಎಚ್)

Leave a Reply

comments

Related Articles

error: