ಕರ್ನಾಟಕ

ಉಡುಪಿ: ಶಾರ್ಟ್ ಸರ್ಕ್ಯೂಟ್ ನಿಂದ ಮನೆ ಬೆಂಕಿಗಾಹುತಿ

ಉಡುಪಿ,ಏ.14- ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆಯೊಂದು ಬೆಂಕಿಗಾಹುತಿಯಾಗಿರುವ ಘಟನೆ ಉಡುಪಿ ಜಿಲ್ಲೆಯ ಶಿರ್ವ ಠಾಣಾ ವ್ಯಾಪ್ತಿಯ ಬೆಳಪುವಿನಲ್ಲಿ ನಡೆದಿದೆ.

ಬೆಳಪು ದ್ವಾರಕಲಗುತ್ತು ಸುಭಾಷ್ ಶೆಟ್ಟಿ ಎಂಬವವರ ಮನೆ ಬೆಂಕಿಗಾಹುತಿಯಾಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಈ ಘಟನೆ ನಡೆದಿದೆ.

ತಕ್ಷಣ ಪಕ್ಕದ ಮೆನೆಯವರು ಅಗ್ನಿಶಾಮಕದಳದ ಸಿಬ್ಬಂದಿ ಹಾಗೂ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇತ್ತೀಚೆಗಷ್ಟೇ ಸುಭಾಷ್ ಶೆಟ್ಟಿ ಅವರು ಮನೆ ನವೀಕರಣಗೊಳಿಸಿದ್ದು, ಮನೆ ಮಂದಿ ಕಾಪುವಿನಲ್ಲಿ ವಾಸವಾಗಿದ್ದರು ಎನ್ನಲಾಗಿದೆ. ಅಗ್ನಿ ಅವಘಡದಿಂದ ಮನೆಯಲ್ಲಿದ್ದ ಗೃಹಪಯೋಗಿ ವಸ್ತುಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. ಬೆಳಪು ಗ್ರಾಮ ಪಂಚಾಯತಿ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಹಾಗೂ ಶಿರ್ವ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲಿಸಿದ್ದಾರೆ. (ಎಂ.ಎನ್)

Leave a Reply

comments

Related Articles

error: