ಪ್ರಮುಖ ಸುದ್ದಿಮೈಸೂರು

ಹೆಚ್.ಡಿ.ಕೋಟೆ ತಾಲೂಕಿನ ಬಾವಲಿ ಗ್ರಾಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ : ಪರಿಶೀಲನೆ

ಮೈಸೂರು,ಏ.15:-ಕೇರಳ ರಾಜ್ಯದಿಂದ ಪ್ರತಿನಿತ್ಯ 400ರಿಂದ 500ವಾಹನಗಳು ಕೇರಳದ ಗಡಿಭಾಗದಲ್ಲಿರುವ ಹೆಚ್.ಡಿ.ಕೋಟೆ ತಾಲೂಕಿನ ಬಾವಲಿ ಚೆಕ್ ಪೋಸ್ಟ ಮೂಲಕ ಹೆಚ್.ಡಿ.ಕೊಟೆ  ತಾಲೂಕಿಗೆ ಬರುತ್ತಿದ್ದು, ಇದರಿಂದ ಈ ಭಾಗದ ಜನರಲ್ಲಿ ಕೊರೋನಾ ಹರಡುವ ಭೀತಿ ಮನೆ ಮಾಡಿದ್ದು, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ನಿನ್ನೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸಾರ್ವಜನಿಕರಿಂದ ಈಗಾಗಲೇ ಹಲವು ದೂರುಗಳು ಬಂದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿದ ಸಚಿವರು ಕೇಂದ್ರ ಗೃಹ ಸಚಿವರ ಆದೇಶದ ಮೇರೆಗೆ ರಾಜ್ಯದ ಗಡಿ ಭಾಗಗಳಲ್ಲಿ ವಾಹನಗಳನ್ನು ಬಿಡಲಾಗುತ್ತಿದೆ. ಜನರ ಹಿತದೃಷ್ಟಿಯಿಂದ ಬುಧವಾರ ಅಧಿಕಾರಿಗಳ ಸಭೆ ಕರೆದು ಚರ್ಚಿಸಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದೆಂದು ಭರವಸೆ ನೀಡಿದರು.

ಬಳಿಕ ಬಳ್ಳೆ ಆದಿವಾಸಿ ಜನರಿಗೆ ಆಹಾರದ ಕಿಟ್ ವಿತರಣೆ ಮಾಡಿದರು. ಇದಕ್ಕೂ ಮುನ್ನ ತಾಲೂಕು ಮಿನಿ ವಿಧಾನಸೌಧದ ಸಭಾಮಗಣದಲ್ಲಿ ತಾಲೂಕು ಮಟ್ಟದ ಟಾಸ್ಕ್ ಪೋರ್ಸ್ ಸಮಿತಿ ಸಭೆ ನಡೆಸಿದ ಸಚಿವರು ಮಹಾಮಾರಿ ಕೊರೋನಾ ವೈರಸ್ ತಡೆಗಟ್ಟುವಲ್ಲಿ ಮತ್ತು ಲಾಕ್ ಡೌನ್ ಜಾರಿ  ಕುರಿತು ಸಾರ್ವಜನಿಕರಿಗೆ ಹಾಗೂ ರೈತರಿಗೆ ತೊಂದರೆಯಾಗದಂತೆ ಯಾವ ರೀತಿ ಕ್ರಮ ವಹಿಸಲಾಗಿದೆ ಎಂಬುದರ ಸಮಗ್ರ ಮಾಹಿತಿಯನ್ನು ಅಧಿಕಾರಿಗಳಿಂದ ಪಡೆದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: