ಮೈಸೂರು

ಗೃಹ ನಿರ್ಮಾಣ ಸಹಕಾರ ಸಂಘಗಳ ಹಿತರಕ್ಷಣಾ ವೇದಿಕೆ ವತಿಯಿಂದ ಬೇಡಿಕೆ ಈಡೇರಿಕೆಗೆ ಒತ್ತಾಯ

ಮೈಸೂರು ವಿಭಾಗೀಯ ಮಟ್ಟದ ಗೃಹ ನಿರ್ಮಾಣ ಸಹಕಾರ ಸಂಘಗಳ ಹಿತರಕ್ಷಣಾ ವೇದಿಕೆ ವತಿಯಿಂದ ಕೆಲವು ಬೇಡಿಕೆಗಳನ್ನು ಈಡೇರಿಸುವಂತೆ  ಒತ್ತಾಯಿಸಿ ಸರ್ಕಾರಕ್ಕೆ ಮನವಿ ಸಲ್ಲಿಸುತ್ತಿದ್ದೇವೆ ಎಂದು ಸಂಘದ ಅಧ್ಯಕ್ಷ ಮಾದೇಸ್ವಾಮಿ ತಿಳಿಸಿದರು.

ಮೈಸೂರಿನ ಪತ್ರಕರ್ತರ ಭವನದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನಮ್ಮ ದೇಶ ಸ್ವತಂತ್ರ ರಾಷ್ಟ್ರವಾಗಿ 70 ವರ್ಷಗಳಾಗಿದ್ದರೂ ಇನ್ನೂ ಕೆಲವು ಕುಟುಂಬಗಳು ವಸತಿ ರಹಿತವಾಗಿ  ಬದುಕುತ್ತಿವೆ. ಅಷ್ಟೇ ಅಲ್ಲದೇ ಉದ್ಯೋಗಕ್ಕಾಗಿ ಪಟ್ಟಣಕ್ಕೆ ವಲಸೆ ಬರುವ ಜನರೂ ಸಹ ದಿನೇ ದಿನೇ ಜಾಸ್ತಿಯಾಗಿರುತ್ತಿದ್ದಾರೆ. ಹೀಗಿರಬೇಕಾದರೆ ಗೃಹ ನಿರ್ಮಾಣ ಸಹಕಾರ ಸಂಘಗಳು ನಿವೇಶನಗಳನ್ನು ಅಭಿವೃದ್ಧಿಮಾಡಿ ಸದಸ್ಯರಿಗೆ ಕೊಡುತ್ತಿರುವುದು ಸಂತೋಷದ ವಿಷಯವಾದರೂ, ಸರ್ಕಾರದಿಂದ ಯಾವುದೇ ಸಹಾಯ ಸಿಗುತ್ತಿಲ್ಲ.  ಆದ್ದರಿಂದ ನಮ್ಮ ಬೇಡಿಕೆಯನ್ನು ಈಡೇರಿಸುವಂತೆ ಸರ್ಕಾರದ ಗಮನ ಸೆಳೆಯಲು ಪ್ರಯತ್ನಿಸಲಾಗುವುದು ಎಂದರು.

ಸುದ್ದಿಗೋಷ್ಠಿಯಲ್ಲಿ ಚಂದ್ರೇಗೌಡ, ಜಯಕುಮಾರ್, ಮಹೇಶ್, ಲೋಕೇಶ್, ಚಂದ್ರಸ್ ಮತ್ತಿತರರು ಉಪಸ್ಥಿತರಿದ್ದರು. (ಕೆ.ಎಸ್-ಎಸ್.ಎಚ್)

Leave a Reply

comments

Related Articles

error: