ಕರ್ನಾಟಕಪ್ರಮುಖ ಸುದ್ದಿ

ಕಲಬುರಗಿಯಲ್ಲಿ 5 ಮಂದಿಗೆ ಕೊರೊನಾ ಸೋಂಕು: ಸೋಂಕಿತರ ಸಂಖ್ಯೆ 395ಕ್ಕೆ ಏರಿಕೆ

ಬೆಂಗಳೂರು,ಏ.20-ರಾಜ್ಯದಲ್ಲಿ ಇಂದು ಮತ್ತೆ ಐವರಲ್ಲಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಕಲಬುರಗಿ ಜಿಲ್ಲೆಯಲ್ಲೇ ಐದು ಪ್ರಕರಣಗಳು ವರದಿಯಾಗಿದೆ.

ಇದರಿಂದ ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 395ಕ್ಕೆ ಏರಿಕೆಯಾಗಿದೆ. ಸೋಂಕಿನಿಂದಾಗಿ ಇದುವರೆಗೂ 16 ಮಂದಿ ಮೃತಪಟ್ಟಿದ್ದು, 111 ಮಂದಿಗೆ ಗುಣಮುಖರಾಗಿದ್ದಾರೆ.

ಜಿಲ್ಲೆಯಲ್ಲಿ 13 ವರ್ಷದ ಬಾಲಕ ಮತ್ತು ಇಬ್ಬರು ಯುವಕರು ಸೇರಿ ಒಟ್ಟು ಐದು ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ.

ರೋಗಿ 392, 13 ವರ್ಷದ ಬಾಲಕನಾಗಿದ್ದು, ರೋಗಿ 393, 30 ವರ್ಷದ ಮಹಿಳೆಯಾಗಿದ್ದು, ರೋಗಿ 395, 19 ವರ್ಷದ ಯುವಕನಾಗಿದ್ದು, ಇವರೆಲ್ಲರೂ ರೋಗಿ 205 ಅವರೊಂದಿಗೆ ಸಂಪರ್ಕದಲ್ಲಿದ್ದರು.

ಇನ್ನು ರೋಗಿ 391, 17 ವರ್ಷದ ಯುವಕನಾಗಿದ್ದು, ರೋಗಿ 175 ಅವರೊಂದಿಗೆ ಸಂಪರ್ಕದಲ್ಲಿದ್ದ. ರೋಗಿ 394, 50 ವರ್ಷದ ವ್ಯಕ್ತಿ ರೋಗಿ 177 ಅವರೊಂದಿಗೆ ಸಂಪರ್ಕದಲ್ಲಿದ್ದರು.

ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 27ಕ್ಕೆ ಏರಿಕೆಯಾಗಿದೆ. ಈ ಪೈಕಿ ಮೂವರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಮೂವರು ಮೃತಪಟ್ಟಿದ್ದಾರೆ. ಇಂದು ಇತರ ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು ವರದಿಯಾಗಿಲ್ಲ(ಎಂ.ಎನ್)

Leave a Reply

comments

Related Articles

error: