ಮೈಸೂರು

ಪೌರ ಕಾರ್ಮಿಕರಿಗೆ ಮತ್ತು ಆಟೋ ಚಾಲಕರಿಗೆ ಆಹಾರದ ಕಿಟ್ ವಿತರಿಸಿದ ಮಾಜಿ ಶಾಸಕ ಕಳಲೆ ಕೇಶವಮೂರ್ತಿ

ಮೈಸೂರು,ಏ.20:- ಕಾಂಗ್ರೆಸ್ ಪಕ್ಷದ ವತಿಯಿಂದ ಪೌರ ಕಾರ್ಮಿಕರಿಗೆ ಮತ್ತು ಆಟೋ ಚಾಲಕರಿಗೆ ಆಹಾರದ ಕಿಟ್ ನ್ನು ಇಂದು ಮಾಜಿ ಶಾಸಕ ಕಳಲೆ ಕೇಶವಮೂರ್ತಿ ವಿತರಿಸಿದರು.

ಇಂದು ಕಾಂಗ್ರೆಸ್ ಪಕ್ಷದ ವತಿಯಿಂದ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಜಿಲ್ಲಾಧ್ಯಕ್ಷ ಡಾಕ್ಟರ್ ವಿಜಯ್ ಕುಮಾರ್ ನೇತೃತ್ವದಲ್ಲಿ ನಗರಸಭೆಯ ಪೌರಕಾರ್ಮಿಕರು ಹಾಗೂ ಆಟೋ ಚಾಲಕರಿಗೂ ಕಾಂಗ್ರೆಸ್ ಪಕ್ಷದ ವತಿಯಿಂದ ಆಹಾರದ ಕಿಟ್ ನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಡಾಕ್ಟರ್ ವಿಜಯಕುಮಾರ್, ನಗರಸಭೆ ಸದಸ್ಯರಾದ ಸಿದ್ದಿಕಿ, ಗಂಗಾಧರ, ಗಾಯತ್ರಿ, ಮಹೇಶ್, ಲತಾ, ಲತಾ ಸಿದ್ದಶೆಟ್ಟಿ, ಅಕ್ಬರ್, ಚೆಲುವ, ಶ್ರೀನಿವಾಸ್, ಶ್ರೀಧರ್ ಸೇರಿದಂತೆ ಇತರರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: