ಕರ್ನಾಟಕಪ್ರಮುಖ ಸುದ್ದಿ

ಮೇ 3ರವರೆಗೆ ಲಾಕ್‌ಡೌನ್ ವಿಸ್ತರಣೆ, ಯಾವುದೇ ರಿಯಾಯಿತಿ ಇಲ್ಲ: ಸಚಿವ ಮಾಧುಸ್ವಾಮಿ

ಬೆಂಗಳೂರು (ಏ.20): ಕೋವಿಡ್ -19 ಸೋಂಕು ತಡೆಯಲು ರಾಜ್ಯದಲ್ಲಿ ವಿಧಿಸಲಾಗಿರುವ ಲಾಕ್‌ಡೌನ್ ಅನ್ನು ಮೇ 3 ರವರೆಗೆ ವಿಸ್ತರಿಸಲು ಕರ್ನಾಟಕ ಸಚಿವ ಸಂಪುಟ ಸಭೆ ನಿರ್ಧರಿಸಿದೆ ಎಂದು ಕಾನೂನು ಸಚಿವ ಜೆ.ಸಿ ಮಾಧುಸ್ವಾಮಿ ಅವರು ತಿಳಿಸಿದ್ದಾರೆ.

ಇಂದಿನಿಂಡ ಐಟಿ-ಬಿಟಿ ಕಂಪನಿಯ ಶೇ.20 ರಷ್ಟು ಉದ್ಯೋಗಿಗಳು ಕಚೇರಿಗಳಿಗ ತೆರಳಬಹುದು ಎನ್ನಲಾಗಿತ್ತು. ಆದರೆ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಐಟಿ-ಬಿಟಿ ಕಂಪನಿ ಪುನಾರಂಭಕ್ಕೆ ಅನುಮತಿ ನೀಡಬಾರದೆಂದು ತೀರ್ಮಾನಿಸಲಾಗಿದೆ ಎಂದು ಮಾಧುಸ್ವಾಮಿ ಹೇಳಿದ್ದಾರೆ. ಅಲ್ಲದೆ ಮೇ 3ರ ತನಕ ಲಾಕ್‍ಡೌನ್ ಯಥಾಸ್ಥಿತಿಯಲ್ಲಿ ಮುಂದುವರಿಯಲಿದೆ. ಹಾಗಾಗಿ ಯಾವುದೇ ರಿಯಾಯಿತಿ ಇರುವುದಿಲ್ಲ ಎಂದು ಅವರು ವಿವರಿಸಿದರು.

ಕೇರಳ, ಉತ್ತರ ಪ್ರದೇಶ ಮಾದರಿಯಲ್ಲಿ ಲಾಕ್ ಡೌನ್ ಜಾರಿಗೆ ತರಲು ಸಂಪುಟ ಸಭೆ ತೀರ್ಮಾನಿಸಿದ್ದು ನಾಳೆಯಿಂದ ಇನ್ನಷ್ಟು ಕಠಿಣ ಕಾನೂನು ಜಾರಿಗೆ ತರಲಾಗುತ್ತದೆ. ಕೇಂದ್ರ ಸರ್ಕಾರದಿಂದ ಮಾರ್ಗಸೂಚಿ ಬಂದ ನಂತರವಷ್ಟೇ ಲಾಕ್ ಡೌನ್ ಸಡಿಲಿಕೆ ಸಂಬಂಧ ಮುಂದಿನ ನಿರ್ಧಾರ ತೆಗೆದುಕೊಳ್ಳಲಿದ್ದೇವೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ. ಇದೇ ವೇಳೆ ಪಾದರಾಯನಪುರ ಪ್ರಕರಣದ ವಿರುದ್ಧ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಲಲಿದೆ ಎಂದು ಸಚಿವರು ತಿಳಿಸಿದರು.

ರಾಜ್ಯದಲ್ಲಿ ಇಂದು ಮತ್ತೆ ಐದು ಕೊರೋನಾ ಪ್ರಕರಣಗಳು ಧೃಢಪಟ್ಟಿದ್ದು. ಒಟ್ಟು ಸಂಖ್ಯೆ 395 ಕ್ಕೇರಿದೆ. ರಾಜ್ಯದಲ್ಲಿ 16 ಮಂದಿ ಕೊರೋನಾ ಮಹಾಮಾರಿಗೆ ಬಲಿಯಾಗಿದ್ದಾರೆ. (ಎನ್.ಬಿ)

Leave a Reply

comments

Related Articles

error: